ajakkala girish bhat
ಬಂಟ್ವಾಳ: ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ ಭಟ್ಟರ ’ಅ–ಸತ್ಯ ಅಥವ ಸತ್ಯ’ ಕೃತಿಯು ’ಅನರ್ತಿಂಗ್ ಅನ್ ಟ್ರುತ್’ ಎಂಬ ಶೀರ್ಷಿಕೆಯೊಂದಿಗೆ ಇಂಗ್ಲಿಷಿಗೆ ಅನುವಾದಗೊಂಡಿದ್ದು ಮಾರ್ಚ್ 3ರಂದು ಭಾನುವಾರ ಅಪರಾಹ್ನ 3 ಗಂಟೆಗೆ ಮಂಗಳೂರಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕನ್ನಡ ಕೃತಿಯನ್ನು ಬಾಳೆಹೊನ್ನೂರಿನ ಹತ್ತನೇ ತರಗತಿಯ ವಿದ್ಯಾರ್ಥಿನಿ ಗೋಧಾ ರಮೇಶ ಇಂಗ್ಲಿಷಿಗೆ ಅನುವಾದಿಸಿದ್ದಾರೆ.
ಪತ್ರಕರ್ತ ಬಿ. ಗಣಪತಿ ಕೃತಿಯ ಕುರಿತು ಮಾತನಾಡಲಿದ್ದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್ ಭಾಗವಹಿಸಲಿದ್ದಾರೆ.
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ