ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ

ಎರಡು ದಿನಗಳ  ಪತ್ರಕರ್ತರ 34 ನೇ ರಾಜ್ಯ ಸಮ್ಮೇಳನ ಮೈಸೂರಿನ  ಸುತ್ತೂರು ಕ್ಷೇತ್ರದಲ್ಲಿ ನಡೆಯಿತು.  ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ  ಚಾಲನೆ ನೀಡಿದರು.

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಸಾನಿಧ್ಯ ವಹಿಸಿದ್ದ ಅದಿಚುಂನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀನಿರ್ಮಲಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

ಇದೇ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ದಿಗೆ ರಾಜ್ಯ ಸರಕಾರ ಸಿದ್ದವಿದ್ದು, ಜಾರಿಯಲ್ಲಿರುವ ಕ್ಷೇಮಾಭಿವೃದ್ದಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಮ್ಮ ಸರಕಾರ ಬದ್ದವಾಗಿದೆ ಎಂದು  ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ  ಸಚಿವ ಜಿ.ಟಿ.ದೇವೇಗೌಡ ‘ಸಾಧ್ವಿ ಸುದ್ದಿಕೋಶ’ವನ್ನು ಬಿಡುಗಡೆಗೊಳಿಸಿದರು. ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು  ಅಧ್ಯಕ್ಷತೆ ವಹಿಸಿದ್ದರು   ಶಾಸಕರಾದ ಎಚ್.ವಿಶ್ವನಾಥ್,ಮಾಧುಸ್ವಾಮಿ, ಯತೀಂದ್ರ ಸಿದ್ದರಾಮಯ್ಯ, ರಮೇಶ್ ಬಾಬು  ಅಶೋಕ್ ಸಿಲ್ವಿಲ್ ನೇಪಾಲ, ರಾಜು ನಾಯ್ಕ್ ಗೋವಾ,  ಸ್ಥಳೀಯ ಮುಖಂಡರಾದ  ಹರೀಶ್ ಗೌಡ,  ನಾರಾಯಣ ಗೌಡ, ಜಿ.ಎಸ್.   ಪ್ರಶಾಂತ್, ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.  ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಆಶಯ ಭಾಷಣಗೈದರು.  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ   ಸಿ.ಕೆ.ಮಹೇಂದ್ರ ಪ್ರಸ್ತಾವಿಸಿ,ಸ್ವಾಗತಿಸಿದರು.   ಪ್ರ.ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ವಂದಿಸಿದರು.  ಚಲನಚಿತ್ರ ನಟಿ ಅಪರ್ಣಾ ನಿರೂಪಿಸಿದರು.

 ಸಮ್ಮೇಳನದಲ್ಲಿ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಪ್ರ.ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,   ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ, ಜಿಲ್ಲಾ ಸಂಘದ ಮಾಜಿ ಉಪಾಧ್ಯಕ್ಷ ವೆಂಕಟೇಶ್ ಬಂಟ್ವಾಳ, ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ರೈ ಕಟ್ಟ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿಷ್ಣುಗುಪ್ತ ಪುಣಚ, ಕಾರ್ಯದರ್ಶಿ ಮಹಮ್ಮದ್ ಆಲಿ, ಹಿರಿಯ ಸದಸ್ಯ ಉದಯಶಂಕರ ನೀರ್ಪಾಜೆ ಭಾಗವಹಿಸಿದ್ದರು.  ರಾಜ್ಯದ ವಿವಿಧ ಜಿಲ್ಲೆಯ,ಹೊರ ರಾಜ್ಯದ ಪತ್ರಕರ್ತರು ಹಾಜರಿದ್ದರು.  ವಸ್ತು ,ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts