ಮೊಡಂಕಾಪುವಿನಲ್ಲಿರುವ ಕಾರ್ಮೆಲ್ ಕಾಲೇಜಿನಲ್ಲಿ ಸ್ಟುಡೆಂಟ್ಸ್ ಡೇ, ಸ್ಕಿಲ್ಸ್ ಎಂಡ್ ಥ್ರಿಲ್ಸ್ ಎಂಬ ಕಾರ್ಯಕ್ರಮ ನಡೆಯಿತು. ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಮಗೆ ಲಭ್ಯವಿರುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು, ಸತತ ಪ್ರಯತ್ನದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಅವರು ಈ ಸಂದರ್ಭ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ ಭಗಿನಿ ಎಂ ಸುಪ್ರಿಯಾ ಎ.ಸಿ ವಹಿಸಿದ್ದರು. ಉಪ ಪ್ರಾಂಶುಪಾಲೆ ಭಗಿನಿ ಲತಾ ಎ.ಸಿ, ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕಿ ಭಾಗ್ಯಶ್ರಿ , ಕಾರ್ಯದರ್ಶಿ ಜೊಸ್ನಾ, ಜೊತೆ ಕಾರ್ಯದರ್ಶಿ ಜೊಯಲ್ ಕ್ರಾಸ್ತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಾಗ್ಯಶ್ರೀ ವಂದಿಸಿ, ಅಖಿಲ್ ಹಾಸನ್ ಹಾಗೂ ಮೆಹಜ಼ಬೀನ್ ಕಾರ್ಯಕ್ರಮ ನಿರೂಪಿಸಿದರು, ಜೊಸ್ನಾ ವಂದಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.