ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಮಾ.9ರಂದು ಶನಿವಾರ ಸಂಜೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಗೆ ಭೇಟಿ ನೀಡಿ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ಧಾರೆ. ಬಂಟ್ವಾಳ ಶಾಸಕ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಪೊಳಲಿಯಲ್ಲಿ ಶುಕ್ರವಾರ ಸಂಜೆ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿನಂತಿ ಮೇರೆಗೆ ಗೃಹಸಚಿವರು ಪೊಳಲಿಗೆ ಆಗಮಿಸುತ್ತಿದ್ದು, ಮಂಗಳೂರು ಕಾರ್ಯಕ್ರಮ ಮುಗಿಸಿ ಕ್ಷೇತ್ರಕ್ಕೆ ಬರಲಿದ್ದಾರೆ. ಬಳಿಕ ದೇವರ ದರ್ಶನ ಪಡೆದು ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಅವರು ಮಾಹಿತಿ ನೀಡಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶನಿವಾರ ಪೊಳಲಿಗೆ ಆಗಮಿಸಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು ಎಂದು ನಾಯ್ಕ್ ಹೇಳಿದರು. ಈ ವೇಳೆ ಯು.ತಾರಾನಾಥ ಆಳ್ವ, ಯು.ಸುಭಾಷ್ ನಾಯ್ಕ್, ಕೃಷ್ಣಕುಮಾರ್ ಪೂಂಜ ಫರಂಗಿಪೇಟೆ, ಕೃಷ್ಣರಾಜ ಮಾರ್ಲ ಮುತ್ತೂರು ಮೊದಲಾದವರಿದ್ದರು.
ರಾಜನಾಥ್ ಸಿಂಗ್ ಭೇಟಿ ಹಿನ್ನೆಲೆಯಲ್ಲಿ ಪೊಲೀಸರು ಈಗಾಗಲೇ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲು ಆರಂಭಿಸಿದ್ದಾರೆ. ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಅವರು ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ಭದ್ರತೆಯ ಕುರಿತು ಪರಿಶೀಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಲಕ್ಷ್ಮೀಪ್ರಸಾದ್ ,ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್ ಮೊದಲಾದವರಿದ್ದರು.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…