ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಮಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಶನಿವಾರ ಸಂಜೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವೆಲ್ಲವೂ ಅಲಂಕೃತಗೊಂಡಿದ್ದು, ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಮಂಗಳೂರಿಗೆ ಭೇಟಿ ನೀಡುವ ಸಂದರ್ಭ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮುಖಂಡರಾದ ಬಿ.ದೇವದಾಸ ಶೆಟ್ಟಿ, ಪವನ್ ಕುಮಾರ್ ಶೆಟ್ಟಿ, ಉದಯ ಕುಮಾರ್ ರಾವ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
ಚಿತ್ರಗಳು: ವಾಮನ ಪೂಜಾರಿ ಪೊಳಲಿ