ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ರವಿವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವಳದ ಅನುವಂಶಿಕ ಆಡಳಿತ ಮೊಕ್ತೇಸರರಾದ ಅಮ್ಮುಂಜೆಗುತ್ತು ಡಾ.ಮಂಜಯ್ಯ ಶೆಟ್ಟಿ, ಮೊಕ್ತೇಸರರಾದ ತಾರನಾಥ ಆಳ್ವ ಉಳಿಪಾಡಿಗುತ್ತು, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಶಾಸಕ ಯು.ರಾಜೇಶ್ ನಾಯ್ಕ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಮಾಜಿ ಸಚಿವ ರಮಾನಾಥ ರೈ, ಕೃಷ್ಣಕುಮಾರ್ ಪೂಂಜಾ ಫರಂಗಿಪೇಟೆ ಮಾಜಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಸ್ವಾಗತಿಸಿದರು.
ಉಗ್ರಾಣ, ದೇವಳದ ವೈಭವ, ಮರದ ಕೆತ್ತನೆಯನ್ನು ವೀಕ್ಷಸಿ ಕಣ್ತುಂಬಿಕೊಂಡು,ಮೆಚ್ಚುಗೆ ವ್ಯಕ್ತಪಡಿಸಿದರು. ಅರ್ಚಕರು ಪ್ರಾರ್ಥಿಸಿ ಪ್ರಸಾದವಿತ್ತರು.
ಶಾಸಕ ಯು. ರಾಜೇಶ್ ನಾಯ್ಕ್ ದೇವಳದ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ದೇವಳದ ಇತಿಹಾಸವನ್ನು ವಿವರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಎಂಎಲ್ ಸಿ ಗಳಾದ ಐವಾನ್ ಡಿಸೋಜ. ಹರೀಶ್ ಕುಮಾರ್ ,ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕೃಪಾ ಆಳ್ವ, ಮನಪಾ ಸದಸ್ಯ ಪ್ರವೀಣ್ ಆಳ್ವ ಮೊದಲಾದವರಿದ್ದರು.