ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ ತಾಲೂಕಿನಲ್ಲಿ ನಡೆದ ಪಲ್ಸ್ ಪೊಲಿಯೋ ಅಭಿಯಾನದಲ್ಲಿ ಶೇ.95.7 ಸಾಧನೆಯಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ. ಒಟ್ಟು 30764 ಮಕ್ಕಳ ಪೈಕಿ 29434 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಪೊಳಲಿಯಲ್ಲಿ ಬ್ರಹ್ಮಕಲಶೋತ್ಸವ ಸಂದರ್ಭ ಆಗಮಿಸಿದ 520 ಪುಟಾಣಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದ್ದಾರೆ.
ತಾಲೂಕು ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಕಾರ್ಯಕ್ರಮ ನಡೆಯಿತು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಡಾ. ಸದಾಶಿವ ಶಾನುಭೋಗ್, ಡಾ.ದೀಪಾ ಪ್ರಭು, ಡಾ. ವಸಂತ ಬಾಳಿಗಾ, ಡಾ. ಸುರೇಂದ್ರನಾಥ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.