ರಂಗಸ್ಥಳದಲ್ಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಹುಡಗೋಡು ಚಂದ್ರಹಾಸ

ಕೊಲ್ಲೂರು ಸಮೀಪದ ಯಳಚಿತ್‌ನಲ್ಲಿ ಭಾನುವಾರ ರಾತ್ರಿ ಕಲಾಧರ ಮೇಳದಿಂದ ಭೀಷ್ಮ ವಿಜಯ ಪ್ರಸಂಗ ನಡೆಯುತ್ತಿತ್ತು. ರಂಗದ ಮೇಲೆ ಸಾಲ್ವ ಪಾತ್ರದಲ್ಲಿ ಅಭಿನಯಿಸುತ್ತಿದ್ದ ಪ್ರಸಿದ್ಧ ಕಲಾವಿದ ಹುಡಗೋಡು ಚಂದ್ರಹಾಸ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ‘ಭೀಷ್ಮಾ’ ಎಂದು ಉದ್ಗಾರ ತೆಗೆಯುತ್ತಲೇ ವೇದಿಕೆಯಲ್ಲಿ ಬಿದ್ದ ಚಂದ್ರಹಾಸ ಮತ್ತೆ ಮೇಲೇಳಲೇ ಇಲ್ಲ.

ರಾಜಕೀಯ ರಂಗಕ್ಕೆ ಕಾಲಿರಿಸಿದ್ದ ಚಂದ್ರಹಾಸ ಅವರು ಉತ್ತರಕನ್ನಡದ ಹಡಿನಬಾಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ರಾಜಕೀಯಕ್ಕೆ ಸೇರಿದ ಬಳಿಕ ಸಕ್ರಿಯ ಯಕ್ಷಗಾನ ವೃತ್ತಿಯಿಂದ ದೂರವಾಗಿ ಹವ್ಯಾಸಿಯಾಗಿ ಕಲಾ ಸೇವೆ ಮುಂದುವರಿಸಿದ್ದರು.

ಜಾಹೀರಾತು

ರಾತ್ರಿ 11. 30 ಸುಮಾರಿಗೆ ದುರ್ಘಟನೆ ನಡೆದಿದ್ದು ತಕ್ಷಣ ಅವರನ್ನು ಬೈಂದೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಹೃದಯಾಘಾತಕ್ಕೊಳಗಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಹದ ಬದುಕು ಮುಗಿಸಿದರು.
ಚಂದ್ರಹಾಸ ಅವರು ಫೇಸ್ ಬುಕ್ ನಲ್ಲಿ ಸಕ್ರಿಯರಾಗಿದ್ದರು. ಅವರ ಅಭಿನಯದ ಕೊನೇ ಕ್ಷಣಗಳು ಫೇಸ್‌ಬುಕ್ ಖಾತೆಯಿಂದ ಲೈವ್ ಆಗಿ ಬರುತ್ತಿತ್ತು.

pic courtesy: Google

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರಂಗಸ್ಥಳದಲ್ಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಹುಡಗೋಡು ಚಂದ್ರಹಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*