ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ನೇರಳಕಟ್ಟೆ ಸಮೀಪದ ಪರ್ಲೋಟು ನಿವಾಸಿ ಬೀಡಿ ಗುತ್ತಿಗೆದಾರ ಖಾಸೀಂ (68 ) ಸೋಮವಾರ ಬೆಳಿಗ್ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.
ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಸಂಚರಿಸುತ್ತದ್ದ ಬೈಕೊಂದು ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ನೇರಳಕಟ್ಟೆ ಬಸ್ಸು ನಿಲ್ದಾಣ ಎದುರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಸಿಂ ಎಂಬವರಿಗೆ ಸೋಮವಾರ ಬೆಳಿಗ್ಗೆ ಡಿಕ್ಕಿಹೊಡೆದಿತ್ತು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.