Categories: ಬಂಟ್ವಾಳ

ಪೊಳಲಿ ಬ್ರಹ್ಮಕಲಶೋತ್ಸವ: ದೇವಳ ಪ್ರವೇಶ ಅವಧಿಯಲ್ಲಿ ಮಾರ್ಪಾಡು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಾಳೆ ಬುಧವಾರ (ಮಾ.13) ಸಂಭ್ರಮದ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಅಂಗವಾಗಿ ದೇವಸ್ಥಾನದ ಒಳಗೆ ಪೂಜಾ ಕೈಂಕರ್ಯಗಳು ನಡೆಯುವ ಹಿನ್ನೆಲೆಯಲ್ಲಿ ಭಕ್ತರ ದೇಗುಲ ಪ್ರವೇಶ ಸಮಯದಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದೆ.

ಜಾಹೀರಾತು

ಬೆಳಗ್ಗೆ 4ರಿಂದ 8.10ರ ವರೆಗೆ ಬ್ರಹ್ಮಕಲಶ ನಡೆಯಲಿರುವುದರಿಂದ ಬೆಳಿಗ್ಗೆ 10 ಗಂಟೆಯ ತನಕ ದೇವಾಲಯದ ಒಳಗೆ ಭಕ್ತರ ಪ್ರವೇಶ ನಿಯಂತ್ರಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆ ತನಕ ದೇವರ ದರ್ಶನಕ್ಕೆ ಮುಕ್ತ ಅವಕಾಶವಿದೆ. ಸಂಜೆ ದೇವರಿಗೆ ರಂಗಪೂಜೆ ನಡೆಯಲಿರುವುದರಿಂದ ಸಂಜೆ 5.30 ರಿಂದ 8.30 ತನಕ ಭಕ್ತರ ಪ್ರವೇಶವನ್ನು ಮತ್ತೆ ನಿಯಂತ್ರಿಸಲಾಗುತ್ತದೆ, ರಾತ್ರಿ8.30ರ ನಂತರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಭಕ್ತರು ಇದಕ್ಕೆ ಸಂಪೂರ್ಣ ಸಹಕರಿಸಬೇಕೆಂದು ದೇವಳದ ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.

ಎಲ್‌ಇಡಿ ಅಳವಡಿಕೆ:

ಬ್ರಹ್ಮಕಲಶೋತ್ಸವದ ಪ್ರಕ್ರಿಯೆಯನ್ನು ವೀಕ್ಷಿಸಲು ಭಕ್ತರಿಗೆ ಅನುಕೂಲವಾಗುವಂತೆ ದೇವಸ್ಥಾನದ ಪರಿಸರದಲ್ಲಿ ಅಲ್ಲಲ್ಲಿ ಒಟ್ಟು 10ಕ್ಕೂ ಅಧಿಕ ಎಲ್‌ಇಡಿ ಸ್ಕ್ರೀನ್ ಗಳನ್ನು ಅಳವಡಿಸಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

7 hours ago