Categories: ಬಂಟ್ವಾಳ

ಶಂಭೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಕಾರ್ಯಕ್ರಮ

ವಿಧ್ಯಾರ್ಥಿಗಳಲ್ಲಿ  ವ್ಯಕ್ತಿತ್ವ ನಿರ್ಮಾಣ, ನಾಯಕತ್ವ, ಪ್ರತಿಭಾ ಪುರಸ್ಕಾರ ನೀಡಿ ಗುರುತಿಸಿ ಗೌರವಿಸುವ ಕೆಲಸ ರೋಟರಿಯಂತಹ  ಅಂತರಾಷ್ಟ್ರೀಯ ಸಂಸ್ಥೆಗಳಿಂದ ನಡೆದಿದೆ ಎಂದು ಬೊಂಡಾಲ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಸನ್ನದು ಪ್ರಧಾನ ಸಮಾರಂಭದಲ್ಲಿ ಸನ್ನದು ಸ್ವೀಕರಿಸಿ ಮಾತನಾಡಿದರು. ರೋಟರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಕೃತಿಕ ವಿನಿಮಯ ಯೋಜನೆಯಡಿಯಲ್ಲಿ ರಾಯಭಾರಿಯಾಗುವ ಅವಕಾಶಗಳನ್ನು ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಪಡೆದುಕೊಳ್ಳಬಹುದು ಎಂದು ರೋಟರಿ ಉಪಾಧ್ಯಕ್ಷರಾದ ಪಲ್ಲವಿ ಕಾರಂತ್ ಹೇಳಿದರು.

ಈ ಸಂದರ್ಭ ರೋಟರಿ  ವತಿಯಿಂದ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಯಿತು.ಜೇಸಿಐ ಜೋಡುಮಾರ್ಗದ ನಿಕಟ ಪೂರ್ವ ಅಧ್ಯಕ್ಷರಾದ ಸವಿತಾ ನಿರ್ಮಲ್  ವಿಧ್ಯಾರ್ಥಿ ವೇತನ ವಿತರಣೆ  ಹಾಗೂ ಮಕ್ಕಳಿಗೆ ಕೈ ತೊಳೆಯುವ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಬಳಿಕ  ಕೈ ತೊಳೆಯುವ  ಸಾಬೂನು ಮಕ್ಕಳಿಗೆ ವಿತರಣೆ ಮಾಡಲಾಯಿತು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಅಧ್ಯಕ್ಷತೆ ವಹಿಸಿದ್ದರು. ಇಂಟರಾಕ್ಟ್ ಕ್ಲಬ್ ಸಂಯೋಜಕ ಶಿಕ್ಷಕ ಹರಿಪ್ರಸಾದ್ ಕುಲಾಲ್ ಸ್ವಾಗತಿಸಿದರು. ಇಂಟರಾಕ್ಟ್ ಕ್ಲಬ್ ಅಧ್ಯಕ್ಷರಾದ ಶ್ರೀವಿಧ್ಯಾ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ