ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ನಿಧನ

ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಅವರು ತೀವ್ರ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ಕಾಂಗ್ರೆಸ್ ಶಾಸಕರಾಗಿದ್ದ ಸಿಎಸ್ ಶಿವಳ್ಳಿ ಅವರಿಗೆ ಇಂದು ಮಧ್ಯಾಹ್ನ 1.30 ಸುಮಾರಿಗೆ ತೀವ್ರ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಸಿಎಸ್ ಶಿವಳ್ಳಿ ಎಂದೇ ಜನಪ್ರಿಯರಾಗಿದ್ದ ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿ ಅವರು ಬಡ ಕುಟುಂಬದಿಂದ ಬಂದವರು. ಯರಗುಪ್ಪಿಯಲ್ಲಿ ಜನಿಸಿದ ಶಿವಳ್ಳಿ ಅವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರಿಗೆ ನಾಲ್ವರು ಸಹೋದರರು, ಮೂರು ಮಂದಿ ಸಹೋದರಿಯರು ಇದ್ದಾರೆ. ಮೂರು ದಶಕಗಳಿಂದ ರಾಜಕೀಯದಲ್ಲಿದ್ದ ಶಿವಳ್ಳಿ, ಆರು ಬಾರಿ ಸ್ಪರ್ಧೆ ಮಾಡಿ, ಮೂರು ಬಾರಿ ಗೆಲುವು ಸಾಧಿಸಿದ್ದರು. 1994ರಲ್ಲಿ ಕೆಸಿಪಿಯಿಂದ ಸ್ಪರ್ಧಿಸುವ ಮೂಲಕ ರಾಜಕೀಯ ಪ್ರವೇಶಿಸಿದ್ದ ಶಿವಳ್ಳಿ ಅವರು, ಮೊದಲ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಶಿವಳ್ಳಿ, 2008ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸೋತರು. 2013 ಮತ್ತು 2018ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts