ದ.ಕ. ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಸೋಮವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಮುಖಂಡರಾದ ಜನಾರ್ದನ ಪೂಜಾರಿ, ರಮಾನಾಥ ರೈ, ಯು.ಟಿ.ಖಾದರ್, ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು. ಇದಕ್ಕೂ ಮೊದಲು ನಗರದ ಪುರಭವನದ ಬಳಿ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…