Categories: ಕಲ್ಲಡ್ಕ

ವೀರಕಂಭದಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಯುವ ಶಕ್ತಿ ಫ್ರೆಂಡ್ಸ್ ವೀರಕಂಬ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಕಾರದೊಂದಿಗೆ ದ್ವಿತೀಯ ವರ್ಷದ ಹಿಂದೂ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟವು ವೀರಕಂಭ ಗ್ರಾಮ ಪಂಚಾಯತಿ ಬಲಿ ನಡೆಯಿತು ಕಾರ್ಯಕ್ರಮವನ್ನು ಕಲ್ಲಡ್ಕ ರೈತರ ಸೇವಾ ಬ್ಯಾಂಕಿನ ನಿರ್ದೇಶಕ ಕೊರಗಪ್ಪ ನಾಯ್ಕ ಉದ್ಘಾಟಿಸಿದರು.

ಜಾಹೀರಾತು

ಪಂದ್ಯಾಟವು ಪ್ರಾರಂಭಕ್ಕೆ ಮುಂಚಿತವಾಗಿ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಹಣತೆ ದೀಪ ಬೆಳಗಿಸಿ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಂಜುಳಾ ಮಾವೆ ,ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್ ,ಗ್ರಾಮ ಪಂಚಾಯತ್ ಸದಸ್ಯರಾದ ರಾಮಚಂದ್ರ ಪ್ರಭು ,ಜನಾರ್ಧನ ಪೂಜಾರಿ ,ಜಯಂತಿ, ನಿಶಾಂತ್ ರೈ ,ಜಯಂತಿ ,ಹಾಲು ಉತ್ಪಾದಕರ ಸಂಘದ ನಿರ್ದೇಶಕ ಕೇಶವ ನಾಯ್ಕ ,ಗಿಲಿಕ್ಕಿಂಜಾ ತಾಯಿ ಉತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ್ ತೆಕ್ಕಿ ಪಾಪು ಯುವ ಶಕ್ತಿ ಫ್ರೆಂಡ್ಸ್ ನ ಅಧ್ಯಕ್ಷ ಜಗದೀಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು  ಪಂದ್ಯಾಟದ ಪ್ರಥಮ ಬಹುಮಾನವನ್ನು ಗಣೇಶ್ ಗೆಳೆಯರಬಳಗ ಗೋಳ್ತಮಜಲು ಎ ತಂಡ ತಂಡವು ದ್ವಿತೀಯ ಬಹುಮಾನವನ್ನು ಪಂಚಲಿಂಗೇಶ್ವರ ಇಚೂರು ತೃತೀಯ ಬಹುಮಾನವನ್ನು ಹನುಮಾನ್ ಪೆರುವಾಯಿ ಹಾಗೂ ಚತುರ್ಥ ಬಹುಮಾನವನ್ನು ಗಣೇಶ್ ಗೆಳೆಯರ ಬಳಗ ಗೋಳ್ತಮಜಲು ಬಿ ತಂಡವು ಪಡೆಯಿತು

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts