ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಜೈನರಪೇಟೆ ಸುಣ್ಣದಗೂಡು ನೇತ್ರಾವತಿ ಹಳೆಯ ಸೇತುವೆಯ ಪಕ್ಕದಲ್ಲಿ ನದಿಯಲ್ಲಿ ಅಪರಿಚಿತ ಶವ ಕಂಡು ಬಂದಿದೆ.
ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಅಪರಿಚಿತ ಶವ ಬೆಳಿಗ್ಗೆ ಕಂಡು ಬಂದಿದ್ದು , ಸ್ಥಳೀಯ ನಿವಾಸಿ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇಲೆ ಬಂಟ್ವಾಳ ನಗರ ಪೋಲೀಸ್ ಎಸ್.ಐ.ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಎಸ್ .ಐ.ಸುಧಾಕರ ತೋನ್ಸೆ ಸ್ಥಳಕ್ಕೆ ಬೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಗೂಡಿನ ಬಳಿಯ ಈಜುಗಾರರು ಶವವನ್ನು ಮೇಲಕ್ಕೆತ್ತಿದ್ದಾರೆ. ಶವದ ಅಂಗಿಯಲ್ಲಿ ಪೊಳಲಿ ನಿವಾಸಿ ಎಂಬುದಕ್ಕೆ ಚೀಟಿಯೊಂದು ದೊರೆತಿದ್ದು ಪೋಲೀಸರು ವಿಳಾಸ ದ ತನಿಖೆ ನಡೆಸುತ್ತಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪಾಣೆಮಂಗಳೂರು ಸುಣ್ಣದಗೂಡು ಬಳಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ"
Be the first to comment on "ಪಾಣೆಮಂಗಳೂರು ಸುಣ್ಣದಗೂಡು ಬಳಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ"