- ಬಂಟ್ವಾಳದಲ್ಲಿ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರ, ಇಂಜಿನಿಯರುಗಳ ಮನೆಗಳಿಗೆ ದಾಳಿ ಮಾಡಿದರೆ, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸತ್ಯಾಗ್ರಹ ಮಾಡುವುದು ಯಾಕೆ ಎಂದು ಬಿಜೆಪಿ ರಾಜ್ಯ ನಾಯಕ ಆಯನೂರು ಮಂಜುನಾಥ ಪ್ರಶ್ನಿಸಿದ್ದಾರೆ.
ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಶುಕ್ರವಾರ ನಡೆದ ಬಂಟ್ವಾಳ ವಿಧಾನಸಭೆ ಕ್ಷೇತ್ರಕ್ಕೆ ಒಳಪಟ್ಟ ಬಿಜೆಪಿಯ ಪೇಜ್ ಪ್ರಮುಖರ ಸಮಾವೇಶದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಈ ಬಾರಿಯೂ ಪುನರಾಯ್ಕೆಗೆ ಎಲ್ಲರ ಆಶೀರ್ವಾದ ಬಯಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಬಿಜೆಪಿ ಗೆದ್ದರಷ್ಟೇ ಭಾರತ ಮಾತಾಕಿ ಜೈ ಎಂಬ ಘೋಷಣೆ ಮೊಳಗುತ್ತದೆ.ಎಂದು ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಇದು ಕೇವಲ ಅಭ್ಯರ್ಥಿ ಗೆಲುವಿಗೋಸ್ಕರ ಇರುವಿನ ಚುನಾವಣೆಯಲ್ಲ. ದೇಶದ ಭದ್ರತೆ, ಅಖಂಡತೆ ಸಮಗ್ರತೆಯನ್ನು ಉಳಿಸುವ ನಿಟ್ಟಿನಲ್ಲಿ ದೃಢ ನಾಯಕತ್ವ ನೀಡಿದ ನರೇಂದ್ರ ಮೋದಿ ಅವರ ಕೈಬಲಪಡಿಸುವ ಜವಾಬ್ದಾರಿ ನಮಗಿದೆ ಎಂದರು.
ಶಾಸಕರಾದ ಉಮಾನಾಥ ಕೋಟ್ಯಾನ್, ಡಾ.ವೈ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಹರೀಶ್ ಪೂಂಜ, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ, ಎ.ರುಕ್ಮಯ ಪೂಜಾರಿ, ಪಕ್ಷ ಪ್ರಮುಖರಾದ ಕ್ಯಾ. ಗಣೇಶ್ ಕಾರ್ಣಿಕ್, ಪ್ರತಾಪ್ ಸಿಂಹ ನಾಯಕ್, ಗೋಪಾಲಕೃಷ್ಣ ಹೇರಳೆ, ಜಿ.ಆನಂದ, ಸುಗುಣ ಎ.ಕಿಣಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ , ಜಿಪಂ ಸದಸ್ಯ ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ರವೀಂದ್ರ ಕಂಬಳಿ, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಪ್ರಮುಖರಾದ ಕ್ಯಾ. ಬ್ರಿಜೇಶ್ ಚೌಟ ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಗುತ್ತಿಗೆದಾರರ ಮನೆಗೆ ಐಟಿ ರೇಡ್ ಮಾಡಿದ್ರೆ ಸಿಎಂ ಪ್ರತಿಭಟನೆ ಯಾಕೆ – ಆಯನೂರು ಪ್ರಶ್ನೆ"