ಲೋಕಸಭೆ ಚುನಾವಣೆ ಸಂದರ್ಭ, ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಹೆಸರನ್ನು ಬಳಸಿಕೊಂಡು ತಪ್ಪು ಸಂದೇಶಗಳನ್ನು ರವಾನಿಸಲಾಗುತ್ತಿದ್ದು, ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ದೂರು ನೀಡಿದ್ದಾರೆ. ಸೋಮವಾರ ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದು, ಸಾಮಾಜಿಕ ಜಾಲತಾಣಗಳನ್ನು ತನ್ನ ಹೆಸರಿನಲ್ಲಿ ತಪ್ಪು ಸಂದೇಶ ಬಿತ್ತರಿಸುತ್ತಿರುವ ವ್ಯಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಇವರು ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ನನಗೆ ಅಪಮಾನ ಮಾಡುವಂತೆ ಮತ್ತು ನನ್ನ ವಿಚಾರಕ್ಕೆ ವಿರುದ್ಧವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸಲಾಗುತ್ತಿರುವ ಸಂದೇಶಗಳ ಪ್ರತಿಯನ್ನು ಒದಗಿಸಿದ್ದಾರೆ. ಈ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…