ನನ್ನ ವಿರುದ್ಧ ಟೀಕೆಗಳಿಗೆ ಜನರೇ ಉತ್ತರ ಕೊಡುತ್ತಾರೆ. ಟೀಕೆಗಳು ಏನೇ ಬರಲಿ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಚುನಾವಣೆಯ ಸಂದರ್ಭ ಜನರೇ ಅದಕ್ಕೆ ಉತ್ತರ ಕೊಡಲಿದ್ದಾರೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಚಿತ್ರನಟಿ ಸುಮಲತಾ ಅಂಬರೀಷ್ ಹೇಳಿದ್ದಾರೆ.
ಜಾಹೀರಾತು
ಧರ್ಮಸ್ಥಳಕ್ಕೆ ಸೋಮವಾರ ಆಗಮಿಸಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ವಿರುದ್ಧ ಟೀಕೆಗಳಿಗೆ ಜನರು ಉತ್ತರ ಕೊಡುತ್ತಾರೆ. ಟೀಕೆಗಳು ಏನೇ ಬರಲಿ ನಾನು ತಲೆಕೆಡಿಸುವುದಿಲ್ಲ ಎಂದರು. ಮತಯಂತ್ರದಲ್ಲಿ ಜನರಿಗೆ ಕನ್ ಫ್ಯೂಸ್ ಆಗಿ ಮಿಸ್ ಗೈಡ್ ಆಗುವ ಸಂಭವವಿಲ್ಲ ಎಂದ ಅವರು, ಜನಕ್ಕೆ ನಾನು ಪರಿಚಯ ಇಲ್ಲದೆ ಇರುವವಳಲ್ಲ. ಎಲ್ಲರಿಗೂ ನಾನು ಯಾರು ಎಂದು ಗೊತ್ತು. ಅಷ್ಟು ಸುಲಭವಾಗಿ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ ಎಂದರು. ನಾಳೆಯಿಂದ ಯಶ್ ಪ್ರಚಾರ ಮಾಡ್ತಾರೆ. ಇವತ್ತು ದರ್ಶನ್ ಪ್ರಚಾರ ಮಾಡ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಈ ಸಂದರ್ಭ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಟೀಕೆಗಳಿಗೆ ಜನರೇ ಉತ್ತರ ಕೊಡಲಿದ್ದಾರೆ: ಸುಮಲತಾ ಅಂಬರೀಷ್"
Be the first to comment on "ಟೀಕೆಗಳಿಗೆ ಜನರೇ ಉತ್ತರ ಕೊಡಲಿದ್ದಾರೆ: ಸುಮಲತಾ ಅಂಬರೀಷ್"