ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಯ ಅಂಚೆ ಮತಪತ್ರ ಅರ್ಜಿ ಸ್ವೀಕಾರ ಕಾರ್ಯ ಮಂಗಳವಾರ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆಯಿತು.
ಏ.18ರಂದು ನಡೆಯುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಅಂಚೆ ಮತಪತ್ರ ಅರ್ಜಿ ಸ್ವೀಕಾರ ಮತ್ತು ರವಾನೆ ಕಾರ್ಯದ ಜೊತೆಗೆ ಅಂಚೆ ಕರ್ತವ್ಯ ದೃಡಪತ್ರ ವಿತರಣೆ ಮಾಡಲಾಗುತ್ತದೆ. ಬಂಟ್ವಾಳ ಆಹಾರ ಶಿರಸ್ತೇದಾರರಾದ ವಾಸು ಶೆಟ್ಟಿ ಅವರ ನೇತೃತ್ವದಲ್ಲಿ ನಡೆಸಲಾಗುವ ಈ ಕಾರ್ಯದಲ್ಲಿ ಎಪಿಎಂಸಿ ಕಾರ್ಯದರ್ಶಿ ಭಾರತಿ ನೋಡಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಬಂಟ್ವಾಳ ತಾಲೂಕು ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳನ್ನು ಈಗಾಗಲೇ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ತಾಲೂಕಾಡಳಿತ ಸಂಪೂರ್ಣವಾಗಿ ಚುನಾವಣಾ ಸಿದ್ಧತೆ ಕಾರ್ಯದಲ್ಲೇ ನಿರತವಾಗಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)