ನೀರಿನಲ್ಲಿ ಆಟವಾಡಲೆಂದು ನೀರು ಸರಬರಾಜು ಟ್ಯಾಂಕಿಗೆ ಇಳಿದ ಮೂವರು ಮಕ್ಕಳು ಸಾವಿಗೀಡಾದ ಘಟನೆ ಪಾಣಾಜೆ ಸಮೀಪದ ಉಡ್ಡಂಗಳ ಎಂಬಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳನ್ನು ವಿಶ್ಮಿತಾ (13), ಚೈತ್ರಾ (10) ಹಾಗೂ ಜಿತೇಶ್ (13) ಎಂದು ಗುರುತಿಸಲಾಗಿದೆ. ಮೃತಪಟ್ಟ ಮಕ್ಕಳೆಲ್ಲಾ ಬೆಟ್ಟಂಪಾಡಿಯ ಮಿತ್ತಡ್ಕ ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಶಾಲೆಗೆ ರಜೆ ಹಿನ್ನಲೆಯಲ್ಲಿ ಆಟವಾಡಲು ತೆರಳಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೋಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಟವಾಡಲೆಂದು ಟ್ಯಾಂಕಿಗಿಳಿದು ಮೂವರು ಮಕ್ಕಳ ಸಾವು"