ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್ಶಿಪ್ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಲ್ರೌಂಡರ್ ಪ್ರದರ್ಶನದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 37 ರನ್ ಅಂತರದ ಗೆಲುವು ದಾಖಲಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿದ ಹಾರ್ದಿಕ್ ಪಾಂಡ್ಯ ಮುಂಬೈ ಗೆಲುವಿಗೆ ಕಾರಣರಾದರು.
ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ಸೂರ್ಯಕುಮಾರ್ ಯಾದವ್ (59) ಬ್ಯಾಟಿಂಗ್ ನೆರವಿನಿಂದ 170 ರನ್ಗಳ ಮೊತ್ತ ಸೇರಿಸಿತು. ಗುರಿ ಬೆನ್ನಟ್ಟಿದ ಸಿಎಸ್ಕೆ, ಕೇದರ್ ಜಾಧವ್ (58) ಹೋರಾಟದ ಹೊರತಾಗಿಯೂ 133 ರನ್ ಗಳಿಸಲಷ್ಟೇ ಶಕ್ತವಾಯಿತು.