Categories: ಬಂಟ್ವಾಳ

ಮೈತ್ರಿಧರ್ಮ ಪಾಲನೆ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ: ಜೆಡಿಎಸ್

ಮೈತ್ರಿಧರ್ಮ ಪಾಲಿಸುತ್ತೇವೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುತ್ತೇವೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್. ಮುಹಮ್ಮದ್ ಶಾಫಿ ಹೇಳಿದ್ದಾರೆ.
ಗುರುವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯು ಅಭಿವೃದ್ಧಿ ಕಾರ್ಯದಲ್ಲಿ ಸಂಪೂರ್ಣವಾಗಿ ಹಿಂದುಳಿದಿದ್ದು, ಸ್ವತಃ ಪಕ್ಷದ ಮುಖಂಡರೇ ನಳಿನ್ ವಿರುದ್ಧ ಅಸಮಧಾನ ವ್ಯಕ್ತಪಡಿಸುವ ಮೂಲಕ ಮೈತ್ರಿ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ಹೇಳಿದರು.
ಕಳೆದ ಪ್ರಧಾನಿ ಮೋದಿ ನೇತೃತ್ವದ ಸರಕಾರವು ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ನಿತ್ಯುಪಯೋಗಿ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್ ಉತ್ಪನ್ನಗಳ ದಾಖಲೆಯ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ನೋಟ್‌ಬ್ಯಾನ್ ಮಾಡಿ ದೇಶದ ಆರ್ಥಿಕಮಟ್ಟವನ್ನು ಕುಸಿಯುವಂತೆ ಮಾಡಿದೆ ಎಂದ ಅವರು, ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರು ಎಲ್ಲ ಧರ್ಮದವರನ್ನು ಒಂದಾಗಿಸುವ ನಾಯಕತ್ವ ಗುಣವನ್ನು ಹೊಂದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಕ್ಷೇತ್ರಾಧ್ಯಕ್ಷ ಬಿ.ಮೋಹನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗೋಮ್ಸ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್, ಮುಖಂಡರಾದ ರಹೀಂ ಪಿ.ಎ., ಉಮೇಶ್, ಯುವಜನತಾ ದಳದ ಅಧ್ಯಕ್ಷ ಜಿ.ಎ.ಅಮಾನುಲ್ಲಾ ಉಪಸ್ಥಿತರಿದ್ದರು.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.