ಲೋಕಸಭೆಯ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಗುರುವಾರ ದಿನವಿಡೀ ದೇವಾಲಯಗಳಿಗೆ ಭೇಟಿ ನೀಡುವುದು ಹಾಗೂ ಮತಯಾಚನೆಗೆ ಪಾದಯಾತ್ರೆಗಳನ್ನು ನಡೆಸುವ ಮೂಲಕ ಬಂಟ್ವಾಳ ಕ್ಷೇತ್ರದಾದ್ಯಂತ ಸಂಚರಿಸಿದರು.
ಬೆಳಗ್ಗೆ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ ಮಿಥುನ್ ರೈ, ಅಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಜೊತೆಗೂಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಕ್ಷ ಪ್ರಮುಖರಾದ ಚಿತ್ತರಂಜನ್ ಶೆಟ್ಟಿ, ಲೋಲಾಕ್ಷ, ಲೋಕೇಶ ಸುವರ್ಣ, ಜೆಡಿಎಸ್ ಕ್ಷೇತ್ರಾಧ್ಯಕ್ಷ ಬಿ.ಮೋಹನ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮೊಡಂಕಾಪು ಚರ್ಚ್, ನಂದಾವರ ದೇವಸ್ಥಾನ, ಪಣೋಲಿಬೈಲ್ ಕ್ಷೇತ್ರ, ನೆಟ್ಲ ಕ್ಷೇತ್ರ ಸಹಿತ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿದ ಮಿಥುನ್ ರೈ, ಕಲ್ಲಡ್ಕ ಜಂಕ್ಷನ್ ಪೇಟೆಯಲ್ಲಿ ಪಾದಯಾತ್ರೆ ನಡೆಸಿದರು. ಬಳಿಕ ಕ್ಷೇತ್ರಾದ್ಯಂತ ಹಲವು ಕಡೆಗಳಿಗೆ ಸಂಚರಿಸಿ, ಮತಯಾಚನೆ ನಡೆಸುವುದರೊಂದಿಗೆ ಪ್ರಾರ್ಥನಾ ಮಂದಿರಗಳಿಗೆ ತೆರಳಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪ್ರಮುಖರಾದ ಎ.ಸಿ.ಭಂಡಾರಿ, ಸಂಜೀವ ಪೂಜಾರಿ, ಅಬ್ಬಾಸ್ ಆಲಿ, ಜಿಪಂ ಸದಸ್ಯೆ ಮಂಜುಳಾ ಮಾವೆ ಮತ್ತಿತರರು ಮಿಥುನ್ ರೈ ಅವರೊಂದಿಗೆ ಹೆಜ್ಜೆ ಹಾಕಿದರು.