ಬಂಟ್ವಾಳ ತಾಲೂಕಿನಲ್ಲಿ ನಳಿನ್ ಕುಮಾರ್ ಕಟೀಲ್ ಮತಯಾಚನೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಗುರುವಾರ ಬಂಟ್ವಾಳ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಅಭ್ಯರ್ಥಿ ಮತಯಾಚನೆ ಮಾಡುವ ಜಾಗಗಳ ವಿವರಗಳನ್ನು ನೀಡಿದ್ದರೆ, ಬಿಜೆಪಿ ಸಾಮಾಜಿಕ ಜಾಲತಾಣಗಳ ಮೂಲಕ ಅಭ್ಯರ್ಥಿಯ ಇರವನ್ನು ತಿಳಿಸುತ್ತಿತ್ತು.

ನಂದನಬಿತ್ತಿಲು ವೈದ್ಯನಾಥ ದೈವಸ್ಥಾನಕ್ಕೆ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ವರ್ಷಾವಧಿ ನೇಮೋತ್ಸವದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಜಿಲ್ಲಾ ಬಿಜೆಪಿ ವಕ್ತಾರರಾದ ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವಿಟ್ಲ ಪಡ್ನೂರು ಗ್ರಾಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಮನೆ ಮನೆ ತೆರಳಿ ಮತ ಯಾಚಿಸಿದರು. ಈ ಸಂದರ್ಭ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಜಿಲ್ಲಾ ಬಿಜೆಪಿ ವಕ್ತಾರರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾ ವಕ್ತಾರ ಜಿತೇಂದ್ರ ಕೊಟ್ಟಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು

ಬುಧವಾರ ರಾತ್ರಿ ಮತ್ತು ಗುರುವಾರ ನಳಿನ್ ಬಂಟ್ವಾಳ ತಾಲೂಕಿನ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಅಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮೋಂತಿಮಾರು ಇಲ್ಲಿ ನಡೆದ ಮಹಾಯಾಗದಲ್ಲಿ ಕಟೀಲ್ ಅವರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಜಿಲ್ಲಾ ಬಿಜೆಪಿ ವಕ್ತಾರರಾದ ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.

ವಿಟ್ಲ ಪಡ್ನೂರು ಗ್ರಾಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಬಳಿಪ ಗುಳಿ ಇಕೊ ಬ್ಲಿಸ್ ಪ್ಯಾಕ್ಟರಿ ನೌಕರರ ಜೊತೆ ಮಾತುಕತೆ ನಡೆಸಿದರು.

 

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕಿನಲ್ಲಿ ನಳಿನ್ ಕುಮಾರ್ ಕಟೀಲ್ ಮತಯಾಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*