ಸಜಿಪಪಡು ಗ್ರಾಮದ ಕಂಚಿಲ ಎಂಬಲ್ಲಿ ಸೋಮವಾರ ನಡೆದ ಅಪಘಾತವೊಂದರಲ್ಲಿ ಸಹೋದರಿಯರಿಬ್ಬರು ಮೃತಪಟ್ಟಿದ್ದಾರೆ. ಕಾರು ಮತ್ತು ಆಟೋರಿಕ್ಷಾ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಂಚಿ ನಿವಾಸಿಗಳಾದ ಜೈನಾಬಾ (45) ಮತ್ತು ಜೋಹರಾ (55) ಅಸು ನೀಗಿದ್ದು, ವಾಹನ ಚಾಲನೆ ನಡೆಸುತ್ತಿದ್ದ ಅಶ್ರಫ್ ಮತ್ತು ಮಹಮ್ಮದ್ ಸಿರಾಜ್ ಗಂಭೀರ ಗಾಯಗಳೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜೋಹರಾ ಅಸೌಖ್ಯದ ಹಿನ್ನೆಲೆಯಲ್ಲಿ ಜೈನಾಬಾ ಅವರು ಮಂಚಿಯಿಂದ ರಿಕ್ಷಾ ಬಾಡಿಗೆಗೆ ಗೊತ್ತುಮಾಡಿ ಚೇಳೂರಿಗೆ ವೈದ್ಯರ ಬಳಿ ತೆರಳುತ್ತಿದ್ದ ಸಂದರ್ಭ ಸಜೀಪ ಪಡು ಗ್ರಾಮದ ಕಂಚಿಲ ಎಂಬಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಿಕ್ಷಾ ಕ್ಕೆ ಡಿಕ್ಕಿ ಹೊಡೆಯಿತು.
ಈ ಸಂದರ್ಭ, ರಿಕ್ಷಾ ಪಲ್ಟಿಯಾಗಿದೆ. ಈ ಸಂದರ್ಭ, ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಸಹೋದರಿಯರನ್ನು ಮಂಗಳೂರು ಆಸ್ಪತ್ರೆ ಗೆ ಕೊಂಡುಹೋಗುವ ದಾರಿ ಮಧ್ಯೆ ಮೃತಪಟ್ಟಿರು. ರಿಕ್ಷಾ ಚಾಲಕ ಆಶ್ರಫ್ ಹಾಗೂ ಕಾರು ಚಾಲಕ ಮಹಮ್ಮದ್ ಸಿರಾಜ್ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…