ಮೋದಿ ಯುವಜನತೆಯ ಐಕಾನ್: ಸುನೀಲ್ ಕುಮಾರ್

ಪ್ರದಾನಿ ನರೇಂದ್ರಮೋದಿ ಒರ್ವವ್ಯಕ್ತಿಯಲ್ಲ,ಭವಿಷ್ಯದ ನವಭಾರತ ನಿರ್ಮಾಣದ ಶಕ್ತಿ, ಅವರು ಯುವಜನತೆಯ ಐಕಾನ್ ಎಂದು ದ.ಕ.ಜಿಲ್ಲಾ ಬಿಜೆಪಿ ಚುನಾವಣಾ ಉಸ್ತುವಾರಿ ,ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ್ದಾರೆ.

ಮಂಗಳವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರಿಗಿಂತ ವಯಸ್ಸಿನಲ್ಲಿ ಮೋದಿ ಹಿರಿಯರು, ಆದರೆ ನರೇಂದ್ರ ಮೋದಿಯವರು ಯುವಜನತೆಯ ಐಕಾನ್ ಆಗಿದ್ದಾರೆ ಎಂದು ಹೇಳಿದರು.

ದ.ಕ.ಜಿಲ್ಲೆಯಲ್ಲಿ ಮೂರು ಹಂತದ ಮನೆ,ಮನೆ ಭೇಟಿ ನೀಡಿ ಪ್ರಚಾರಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಲೋಕಸಭಾ ಕ್ಷೇತ್ರದ 1861 ಬೂತ್ ಗಳಲ್ಲಿಯೂ ಮೊದಲ ಹಂತದ ಪ್ರಚಾರಕಾರ್ಯ ಮುಗಿದಿದ್ದು,ಎ.10 ರಿಂದ ಎರಡನೇ ಹಂತದ ಮನೆ,ಮನೆ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಸುನೀಲ್ ಕುಮಾರ್ ತಿಳಿಸಿದರು.

ಲಕ್ಷ ಜನ: ಏ.13 ರಂದು ಸಂಜೆ 3.30ಕ್ಕೆ  ಪ್ರದಾನಿ ನರೇಂದ್ರಮೋದಿಯವರು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಭಾಗವಹಿಸುವ ವಿಜಯಸಂಕಲ್ಪ ರಾಲಿಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.ಈ ರಾಲಿ ಚುನಾವಣಾ ಪ್ರಚಾರದ ದಿಕ್ಕನ್ನೇ ಬದಲಿಸಲಿದ್ದು,ಬಂಟ್ವಾಳ ಕೇತ್ರದಿಂದಲೂ   ಶಾಸಕ ಯು.ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ ಸುಮಾರು 10 ಸಾವಿರಮಂದಿ ಕಾರ್ಯ ಕರ್ತರು ಭಾಗವಹಿಸಲಿದ್ದಾರೆ.ಈ ರಾಲಿಯಲ್ಲಿ 5 ಸಾವಿರಮಂದಿ ಕಾರ್ಯಕರ್ತರಿಗೆ ಚೌಕಿದಾರಪೇಟೆ ಧರಸಲು ಅವಕಾಶ ಕಲ್ಪಿಸಲಾಗಿದೆ.ಭಾಗವಹಿಸುವವರು ಸಂಜೆ 3.30ರ ಒಳಗಾಗಿಮೈದಾನದ ಒಳಗೆ ಪ್ರವೇಶಿಸಬೇಕು ಎಂದು ಸುನೀಲ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಯು.ರಾಜೇಶ್ ನಾಯ್ಕ್ ,ಸಹ ಪ್ರಭಾರಿ ಪ್ರತಾಪ್ ಸಿಂಹ ನಾಯಕ್,ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಸಂಚಾಲಕ ಗೋಪಾಲಕೃಷ್ಣ ಹೇರಳೆ,ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಬಂಟ್ವಾಳ ಕ್ಷೇತ್ರದ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಪ್ರ.ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ,ಕಾರ್ಯದರ್ಶಿ ರಮಾನಾಥ ರಾಯಿ,ಮಾಜಿ ಪುರಸಭಾಧ್ಯಕ್ಷ ದಿನೇಶ್ ಭಂಡಾರಿ,ಪುರುಷೋತ್ತಮ ಶೆಟ್ಟಿ ವಾಮದಪದವು,ಗಣೇಶ್ ರೈ ಮಾಣಿ ಉಪಸ್ಥಿತರಿದ್ದರು.

 

 

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.

ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

 

 

Be the first to comment on "ಮೋದಿ ಯುವಜನತೆಯ ಐಕಾನ್: ಸುನೀಲ್ ಕುಮಾರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*