Categories: ಬಂಟ್ವಾಳ

ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಕ್ರಮ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಸಹಯೋಗದಲ್ಲಿ ನವಜೀವನ ಸಮಿತಿಯ ಪೋಷಕರ ತರಬೇತಿ ಕಾರ್ಯಕ್ರಮ ಬಂಟ್ವಾಳ  ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ  ನಡೆಯಿತು.

ಜಾಹೀರಾತು

ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ ಕಾರಂತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ನವಜೀವನ ಸಮಿತಿ ಸದಸ್ಯರಿಗೆ ಶುಭ ಹಾರೈಸಿದರು.

ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿರ್ದೇಶಕರಾದ ವಿವೇಕ್ ವಿ. ಪಾಯಸ್ ಸಂಪನ್ಮೂಲ  ವ್ಯಕ್ತಿಯಾಗಿ  ಭಾಗವಹಿಸಿ ಬಂಟ್ವಾಳದಲ್ಲಿ ನಡೆದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಮದ್ಯ ವರ್ಜಿತರಾಗಿ ನವಜೀವನವನ್ನು ಕಂಡುಕೊಂಡ  ಸದಸ್ಯರು ಒಂದೊಂದು ಶಿಬಿರವನ್ನು ನಡೆಸಲು ತಿಳಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ನವಜೀವನ ಸಮಿತಿಗೆ ಪೋಷಕರನ್ನು ಆಯ್ಕೆ ಮಾಡಿದರು. ಶಿಬಿರಾಧಿಕಾರಿ ವಿದ್ಯಾಧರ್  ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಜಯಾನಂದ್ ಪಿ ಕಾರ್ಯಕ್ರಮ ನಿರೂಪಿಸಿದರು.

 

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಮೂರನೇ ವರ್ಷದಲ್ಲಿ  ಮುನ್ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts