ಬಿ.ಸಿ.ರೋಡ್ ಸರ್ವೀಸ್ ರಸ್ತೆಯಲ್ಲಿ ಭಾನುವಾರ ರಾತ್ರಿಯಿಂದಲೇ ನೀರಿನ ಪೈಪ್ ಒಡೆದು ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸೋಮವಾರ ಮಧ್ಯಾಹ್ನ ಪುರಸಭೆಯ ಸಿಬ್ಬಂದಿ ದುರಸ್ತಿ ಕಾರ್ಯ ಆರಂಭಿಸಿದರು. ಈ ವೇಳೆ ಘನ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ನೀರಿನ ಪೈಪು ಒಡೆದು ಲೀಟರುಗಟ್ಟಲೆ ಕುಡಿಯುವ ನೀರು ರಸ್ತೆಯಲ್ಲೇ ಹರಿಯುತ್ತಿದ್ದುದು ಕಂಡುಬಂದಿತ್ತು.