Categories: ಬಂಟ್ವಾಳ

ಬಂಟ್ವಾಳ ಕ್ಷೇತ್ರದಲ್ಲಿ 25 ಸಾವಿರ ಲೀಡ್: ರಾಜೇಶ್ ನಾಯ್ಕ್ ವಿಶ್ವಾಸ

ಎರಡು ಹಂತದ ಮನೆ,ಮನೆ ಪ್ರಚಾರ ಪೂರ್ಣಗೊಂಡಿದೆ,ಪ್ರದಾನಿ ನರೇಂದ್ರಮೋದಿಯವರ ಮಂಗಳೂರು ಭೇಟಿ ಕಾರ್ಯಕ್ರಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು,ಕಾರ್ಯಕರ್ತರಲ್ಲು ಉತ್ಸಾಹ ಇಮ್ಮಡಿಗೊಂಡಿದೆ.ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ 25 ಸಾವಿರ ಮತಗಳ ಅಂತರದ ಮುನ್ನಡೆ ಗಳಿಸಲಿದೆ ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಬಿ.ಸಿ.ರೋಡಿನಲ್ಲಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಳೆದ ವಿಧಾನಸಭಾ ಚುನಾವಣೆಯಲ್ಲಿ ಏಳು ಮಂದಿ ಬಿಜೆಪಿ ಶಾಸಕರನ್ನು ಗೆಲ್ಲಿಸಿದ ದ.ಕ.ಜಿಲ್ಲೆಯ ಜನತೆ ಈ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸುವ ಮೂಲಕ ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ದಿ ಪಡಿಸಲು ಸಹಕರಿಸುವಂತೆ ಮನವಿ ಮಾಡಿದರು.

ದ.ಕ.ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ತನ್ನ ಸಂಸದರ ಪ್ರದೇಶಾಭಿವೃದ್ದಿ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡಿರುವ ನಂ.1 ಸಂಸದರಾಗಿ ಪ್ರಧಾನಿಯವರ ಕಲ್ಪನೆಯ ಸಂಸದರ ಆದರ್ಶ ಗ್ರಾಮ ಯೋಜನೆಯ ಅನುಷ್ಠಾನದಲ್ಲಿ ರಾಜ್ಯದಲ್ಲಿ ಪ್ರಥಮ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತೊಬ್ಬ ಪರ್ಯಾಯ ವ್ಯಕ್ತಿಯೇ ಇಲ್ಲ..ದೇಶವನ್ನಾಳುವ ಶಕ್ತಿ ಮೋದಿಯವರಿಗೆ ಹೊರತು ವಿಪಕ್ಷದಲ್ಲಿ ಅಂತಹ ನಾಯಕರು ಯಾರಿದ್ದಾರೆ ಎಂದು ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಪ್ರಶ್ನಿಸಿದರು. ವಿಪಕ್ಷದ ನಾಯಕರು ಮೋದಿಯವರನ್ನು ಬೈಯ್ಯುವ ಭಾಷಣ ಬಿಟ್ಟರೆ ದೇಶದ ಹಿತದೃಷ್ಟಿಯಿಂದ ಅಭಿವೃದ್ದಿಯ ಚಿಂತನೆಯ ಯಾವುದೇ ಹೇಳಿಕೆಗಳು ನೀಡುತ್ತಿಲ್ಲ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ದೇವದಾಸ ಶೆಟ್ಟಿ, ಪದ್ಮನಾಭಕೊಟ್ಟಾರಿ,ಅಪ್ಪಯ್ಯಮಣಿಯಾಣಿ,ಜಿ.ಆನಂದ,ರಾಮದಾಸ ಬಂಟ್ವಾಳ,ದಿನೇಶ್ ಅಮ್ಟೂರು, ಮೋನಪ್ಪ ದೇವಸ್ಯ,ದಿನೇಶ್ ಭಂಡಾರಿ,ದೇವಪ್ಪ ಪೂಜಾರಿ ಮೊದಲಾದವರಿದ್ದರು.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts