ಮತಯಂತ್ರಗಳ ರವಾನೆಗೆ ಸಿದ್ಧತೆ ಪರಿಶೀಲನೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಜೋಡನೆ ಸಿದ್ಧತೆ ಕೆಲಸವು ಮೊಡಂಕಾಪು ಇನ್ಪೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಹಾಲ್ ನಲ್ಲಿ  ಗುರುವಾರ ರಾತ್ರಿ ನಡೆಯಿತು. ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರು ಕೇಂದ್ರಕ್ಕೆ ಭೇಟಿ ನೀಡಿ ಮತ ಯಂತ್ರ ಜೋಡಣೆ, ಸಿದ್ಧತೆ

ಹಾಗೂ ಚುನಾವಣೆ ಕಾರ್ಯಯೋಜನೆಗಳ ಕುರಿತು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ನೀಡಿದರು 21 ಸೆಕ್ಟರ್ ಆಧಿಕಾರಿ,ಗ್ರಾಮ ಲೆಕ್ಕಾಧಿಕಾರಿ ಹಾಗೂ ಗ್ರಾಮ ಸಹಾಯಕರೊಂದಿಗೆ ಕೆಲಸ ಕಾರ್ಯ ನಡೆಯಿತು. ಭೂಮಾಪನ ಇಲಾಖೆಯ ಸಿಬ್ಬಂದಿಗಳು  ಸಹಿತ ಹಲವಾರು ಈ ಸಂದರ್ಭದಲ್ಲಿ ಕಾರ್ಯನಿರತರಾಗಿದ್ದು ಸಿದ್ದತೆ ಕೆಲಸವು ರಾಜಕೀಯ ಪಕ್ಷದ ಮುಖಂಡರ ಸಮಕ್ಷಮ ನಡೆಯಿತು. ಬಂಟ್ವಾಳ ಚುನಾವಣಾಧಿಕಾರಿ ಮಹೇಶ್, ಬಂಟ್ವಾಳ ತಹಶೀಲ್ದಾರ್ ಸಣ್ಣ ರಂಗಯ್ಯ , ಚುನಾವಣಾ ಉಪತಹಶೀಲ್ದಾರ್ ದಾದಾ ಪೈರೋಜ್,  ಚುನಾವಣಾ ಉಪತಹಶೀಲ್ದಾರ್ ರವಿಶಂಕರ್, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು,ಸದಾಶಿವ ಕೈಕಂಬ ಹಾಗೂ ಇತರ ಇಲಾಖಾ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮತಯಂತ್ರಗಳ ರವಾನೆಗೆ ಸಿದ್ಧತೆ ಪರಿಶೀಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*