Categories: ಕಲ್ಲಡ್ಕ

ಬಾಳ್ತಿಲದಲ್ಲಿ ಬೆಂಕಿ ಆಕಸ್ಮಿಕ, ಮನೆ ಬಹುತೇಕ ಭಸ್ಮ

ಕಲ್ಲಡ್ಕ ಸಮೀಪ ಬಾಳ್ತಿಲ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದ ಘಟನೆಯಲ್ಲಿ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಬಹುತೇಕ ಮನೆ ಭಸ್ಮಗೊಂಡಿದೆ. ಇದರಿಂದ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ನಾಶವಾಗಿವೆ.

ಜಾಹೀರಾತು

ಕಲ್ಲಡ್ಕ ಬಾಳ್ತಿಲ ಗ್ರಾಮದ ದಂಡೆಮಾರು ಕಲ್ಲಪಾಪು ಎಂಬಲ್ಲಿರುವ ಚಂದ್ರಶೇಖರ ನಾಯ್ಕ್ ಹಾಗೂ ಅವರ ಮನೆಮಂದಿ ಸಂಬಂಧಿಕರ ಮದುವೆಗೆಂದು ಬ್ರಹ್ಮರಕೂಟ್ಲುವಿನಲ್ಲಿರುವ ಬಂಟರ ಭವನಕ್ಕೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಈ ಸಂದರ್ಭ ವಾಸದ ಮನೆ ಮತ್ತು ದಾಸ್ತಾನಿರಿಸಲಾಗಿದ್ದ ಸುಮಾರು 40 ಕ್ವಿಂಟಲ್ ಅಡಕೆ ಸುಟ್ಟು ಕರಕಲಾಗಿವೆ. ಬಂಟ್ವಾಳ ಅಗ್ನಿಶಾಮಕದಳದ ತಂಡ ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

ಸ್ಥಳಕ್ಕೆ ಬಂಟ್ವಾಳ  ಶಾಸಕ ರಾಜೇಶ್  ನಾಯ್ಕ್  ಉಳಿಪ್ಪಾಡಿ,  ಬಂಟ್ವಾಳ ತಹಶಿಲ್ದಾರ್ ಸಣ್ಣರಂಗಯ್ಯ ಭೇಟಿ ನೀಡಿದರು. ತಾಲೂಕು ಪಂಚಾಯತ್  ಸದಸ್ಯೆ ಲಕ್ಷ್ಮಿ ಗೋಪಾಲ, ಪ್ರಮುಖರಾದ ಚೆನ್ನಪ್ಪ ಕೋಟ್ಯಾನ್, ದೇವದಾಸ್  ಶೆಟ್ಟಿ, ದಿನೇಶ ಅಮ್ಟೂರು, ಶ್ರೀಕಾಂತ್ ಶೆಟ್ಟಿ , ಶೋಬಿತ್ ಪೂಂಜ, ಆನಂದ ಶೆಟ್ಟಿ, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ತಾಲೂಕು ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ಗ್ರಾಮ ಸಹಾಯಕ ದಿವಾಕರ ಪರಿಶೀಲನೆ ನಡೆಸಿ ದರು ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಮೂರನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ