ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಗಂಪದಡ್ಡ ಎಂಬಲ್ಲಿ ವ್ಯಕ್ತಿಯೊಬ್ಬ ಇಸ್ಪೀಟ್ ಚಟಕ್ಕಾಗಿ ತನ್ನದೇ ಮನೆಯ ನಗ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಜಾಹೀರಾತು
ಗಂಪದಡ್ಡ ನಿವಾಸಿ ಸಾಧಿಕ್ ಬಂಧಿತ ಆರೋಪಿ. ಈತನಿಂದ ಪೊಲೀಸರು 62 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿರುತ್ತಾರೆ. ಇದರ ಒಟ್ಟು ಮೌಲ್ಯ ಒಂದು ಲಕ್ಷದ ಎಂಭತ್ತೆರಡು ಸಾವಿರ ರೂಪಾಯಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯ ಹಿಂಬಾಗಿಲನ್ನು ಒಡೆದು ಮನೆಯೊಳಗೆ ಪ್ರವೇಶಿಸಿ ಮನೆಯೊಳಗಿನ ಕಬ್ಬಿಣದ ಬೀರುವನ್ನು ಹರಿತ ಆಯುಧದಿಂದ ಮೀಟಿ ಬೀರುವಿನೊಳಗಿದ್ದ ಚಿನ್ನದ ಒಡವೆಗಳು ಹಾಗೂ ನಗದು ಹಣವನ್ನು ಕಳವುಗೈಯಲಾಗಿತ್ತು. ಈತ ಇಸ್ಪೀಟ್ ಆಟದ ಚಟಕ್ಕೆ ಹಣಕಾಸು ಹೊಂದಿಸಲು ಈ ಕಳವು ಕೃತ್ಯ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಇಸ್ಪೀಟ್ ಚಟಕ್ಕೆ ತನ್ನದೇ ಮನೆಯಿಂದ ನಗ,ನಗದು ಕಳವು"
Be the first to comment on "ಇಸ್ಪೀಟ್ ಚಟಕ್ಕೆ ತನ್ನದೇ ಮನೆಯಿಂದ ನಗ,ನಗದು ಕಳವು"