Categories: ಕಲ್ಲಡ್ಕ

ಮಹಾಪಾದುಕಾ ಪೂಜೆ: ಕಾರ್ಯಕರ್ತರ ಅಭಿನಂದನೆ ಸಭೆ

ಶ್ರೀರಾಮಚಂದ್ರಾಪುರಮಠ ದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದಲ್ಲಿ ಅವರ 26ನೇ ಸನ್ಯಾಸಗ್ರಹಣ ದಿನದ ಅಂಗವಾಗಿ ಜೀವನದಾನ ಮತ್ತು 26ನೇ ಯೋಗಪಟ್ಟಾಭಿಷೇಕ ದಿನದ ಅಂಗವಾಗಿ ನಡೆದ ಮಹಾಪಾದುಕಾ ಪೂಜೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಈ ಯಶಸ್ಸು ಕಾರ್ಯಕರ್ತರದ್ದು. ತನು, ಮನೋ, ಧನಗಳ ಅತ್ಯದ್ಭುತ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ಯೋಗಪಟ್ಟಾಭಿಷೇಕ ಆಯೋಜನ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ಶ್ಲಾಘಿಸಿದರು.
ಅವರು ರವಿವಾರ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದ ಜನಭವನದಲ್ಲಿ ನಡೆದ ಕಾರ್ಯಕರ್ತರ ಅಭಿನಂದನೆ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಸಮಿತಿ ಕೋಶಾಧಿಕಾರಿ ಬಂಗಾರಡ್ಕ ಜನಾರ್ದನ ಭಟ್ ಲೆಕ್ಕಪತ್ರ ಮಂಡಿಸಿ, ಒಟ್ಟು ಲೆಕ್ಕಾಚಾರದಲ್ಲಿ ಮೊತ್ತ ಉಳಿತಾಯವಾಗಿದೆ. ಇದೀಗ ಅಂದಾಜು ಲೆಕ್ಕಪತ್ರ ಮಂಡಿಸಲಾಗುತ್ತಿದ್ದು ಸಂಪೂರ್ಣ ವಿವರವನ್ನು ಶೀಘ್ರದಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ಸೇರಾಜೆ ಸುಬ್ರಹ್ಮಣ್ಯ ಭಟ್ ಅವರು ಮಾತನಾಡಿ, ಕಾರ್ಯಕ್ರಮ ಯಶಸ್ಸಿನಲ್ಲಿ ಪ್ರತಿಯೊಂದು ವಿಭಾಗದವರ ಶ್ರಮವಿದೆ. ಶ್ರೀ ಗುರುಗಳು ನುಡಿದಂತೆ ಇದು ಮಠಗಳ ಇತಿಹಾಸದಲ್ಲಿ ದಾಖಲೆಯಾಗಿದೆ ಎಂದರು.
ಮುಳ್ಳೇರಿಯ ಮಂಡಲ ಅಧ್ಯಕ್ಷ ಪ್ರೊ.ಟಿ.ಶ್ರೀಕೃಷ್ಣ ಭಟ್, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಅಶೋಕ್ ಕೆದ್ಲ, ಮೆನೇಜರ್ ಶಿವಪ್ರಸಾದ್ ಉಪಸ್ಥಿತರಿದ್ದರು. ವಿವಿಧ ಕಾರ್ಯಕರ್ತರು ಅನಿಸಿಕೆ ವ್ಯಕ್ತಪಡಿಸಿದರು. ಇದೇ ಸಂದರ್ಭ ಶ್ರೀಮಠದ ಮೆನೇಜರ್ ಶಿವಪ್ರಸಾದ್ ಮತ್ತು ಪ್ರಸನ್ನ ಅವರಿಗೆ ವಿಶೇಷ ನಗದು ನೀಡಿ ಪುರಸ್ಕರಿಸಲಾಯಿತು.
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts