Categories: ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ಭೀಕರ ಅಪಘಾತ, ಇಬ್ಬರು ಮೃತ

ಬಿ.ಸಿ.ರೋಡಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಾಗರ್ ಆಡಿಟೋರಿಯಂ ಎದುರು ಶುಕ್ರವಾರ ಮಧ್ಯಾಹ್ನ ನಡೆದ ಭೀಕರ ಅಘಪಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಸೆಲೆರಿಯೋ ಮಾರುತಿ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ನಜ್ಜುಗುಜ್ಜಾಗಿದೆ.

ಜಾಹೀರಾತು

ಮಂಗಳೂರು ಜಪ್ಪುಗುಡ್ಡೆ ನಿವಾಸಿಗಳಾದ ರುಕ್ಮಿಣಿ ಸಿ. ಮಲ್ಲಿ (63) ಮತ್ತು ಸರೋಜಿನಿ ಟಿ. ಶೆಟ್ಟಿ (65) ಮೃತಪಟ್ಟವರು. ಕಾರಿನಲ್ಲಿದ್ದ ಅನುಷ (40), ಕಾರು ಚಾಲಕ ಮಂಗಳೂರಿನ ಶಕ್ತಿನಗರ ನಿವಾಸಿ ಉಮೇಶ್ (45) ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಕಾರಿನಲ್ಲಿದ್ದವರು ಗೃಹಪ್ರವೇಶಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಬಸ್ಸು ಉಪ್ಪಿನಂಗಡಿಯಿಂದ ಮಂಗಳೂರಿಗೆ ಬರುತ್ತಿದ್ದರೆ, ಕಾರು ಮಂಗಳೂರಿನಿಂದ ಪಾಣೆಮಂಗಳೂರು ಕಡೆಗೆ ಸಾಗುತ್ತಿತ್ತು. ಬಂಟ್ವಾಳ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ದೊರಕಬೇಕಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ