ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾವಿಯೊಂದನ್ನು ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಘಟನೆ ಸಂಭವಿಸಿದ್ದು, ಚೋಟು ಮತ್ತು ಗಫೂರ್ ಸಾವನ್ನಪ್ಪಿದವರು.
ಕೆ.ಜೆ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಟ್ಯಾನರಿ ರಸ್ತೆ ಬಳಿಯ ಟೀ ಅಂಗಡಿಯೊಂದರ ಹಿಂಭಾಗವಿದ್ದ ಬಾವಿಯನ್ನು ಸ್ವಚ್ಛಗೊಳಿಸಲು ಚೋಟು ಇಳಿದಾಗ ಅಪಾಯ ಸಂಭವಿಸಿದ್ದು. ಚೋಟುವನ್ನು ರಕ್ಷಿಸಲು ಗಫೂರ್ ಇಳಿದಿದ್ದು ಇಬ್ಬರೂ ಮೃತಪಟ್ಟಿದ್ದಾರೆ.