ಬಡಗಕಜೆಕಾರು ಗ್ರಾಮದಲ್ಲಿ ಚಿರತೆ ಕಾಟ?

ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದಲ್ಲಿ ಚಿರತೆಯೊಂದು ಕಾಟ ನೀಡುತ್ತಿದೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆಯ ಮೊರೆ ಹೋಗಿದ್ದಾರೆ.

ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ ಮಡಾವು ನಿವಾಸಿ ಕುಸುಮಾ ಶೆಟ್ಟಿ ಅವರ ಮನೆಯ ಅಂಗಳದಿಂದ ಮುಂಜಾನೆ ಸುಮಾರು ಮೂರು ಗಂಟೆಯ ವೇಳೆ ಗೆ ನಾಯಿಯನ್ನು ಚಿರತೆಯೊಂದು ಬೇಟೆಯಾಡಿ.   ಎತ್ತಿ ಕೊಂಡು ಹೋಗಿದೆ. ನಾಯಿ ಜೋರಾಗಿ ಬೊಗಳುವುದನ್ನು ಕೇಳಿಸಿಕೊಂಡ ಮನೆಯವರು ಎಚ್ಚರಗೊಂಡು ಹೊರಬಂದು  ನೋಡುತ್ತಿದಂತೆ  ಚಿರತೆ ನಾಯಿಯನ್ನು ಕೊಂದು ಎತ್ತಿಕೊಂಡು ಹೋಗಿದೆ. ಈ ಬಗ್ಗೆ  ಬಂಟ್ವಾಳ ಅರಣ್ಯ ಇಲಾಖೆ ಗೆ ಲಿಖಿತ ವಾಗಿ ದೂರು ಕೂಡಾ ನೀಡಲಾಗಿದ್ದು, ಚಿರತೆ ಹಾವಳಿಯಿಂದ ಮುಕ್ತಿಗೊಳಿಸಲು ಈ ಭಾಗದ ಜನರು ಇಲಾಖೆ ಯ ಮೊರೆ ಹೋಗಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಡಗಕಜೆಕಾರು ಗ್ರಾಮದಲ್ಲಿ ಚಿರತೆ ಕಾಟ?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*