ವಿಟ್ಲ

624 ಅಂಕ ಗಳಿಸಿದ ವಿಟ್ಲದ ಚಿನ್ಮಯಿ

ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ 2019ನೇ ಸಾಲಿನ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 624 ಅಂಕ ಗಳಿಸಿದ್ದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಈ ಸಂಭ್ರಮವನ್ನು ಹೆತ್ತವರಾದ ರಾಜನಾರಾಯಣ ಭಟ್ ಕೂಡೂರು ಮತ್ತು ಗೀತಾ ಆರ್ ಭಟ್ ಇವರೊಂದಿಗೆ ಹಂಚಿಕೊಂಡಾಗ.

ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ 2019ನೇ ಸಾಲಿನ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 624 ಅಂಕ ಗಳಿಸಿದ್ದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಶಾಲೆ ಸತತ 16 ನೇ ವರ್ಷ ಸತತ ನೂರು ಶೇ. ಫಲಿತಾಂಶವನ್ನು ಪಡೆದ ಹೆಗ್ಗಳಿಕೆಯನ್ನು ಹೊಂದಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಲ್.ಎನ್.ಕೂಡೂರು ತಿಳಿಸಿದರು.

ಅವರು ಮಂಗಳವಾರ ಫಲಿತಾಂಶದ ಬಳಿಕ ಶಾಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಶಾಲೆ ನಡೆದು ಬಂದ ದಾರಿಯ ಬಗ್ಗೆ ಮಾತನಾಡಿದರು. ಶಿಕ್ಷಣ ಸಂಸ್ಥೆಯ ಪ್ರಿನ್ಸಿಪಾಲ್ ಜಯರಾಮ ರೈ ಸಾಧನೆಯ ಬಗ್ಗೆ ಅಂಕಿ ಅಂಶ ನೀಡಿ ಈ ಬಾರಿ 98 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ ಚಿನ್ಮಯಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಶಾಲೆಯ ನವ್ಯಶ್ರೀ 621 ಅಂಕ ಗಳಿಸಿದರೆ, ಕಾರ್ತಿಕ್ ಶೆಟ್ಟಿ ಹಾಗೂ ಪುಷ್ಪರಾಜ್ 620 ಅಂಕ ಗಳಿಸಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಆಡಳಿತಾಧಿಕಾರಿ ಮೋನಪ್ಪ ಶೆಟ್ಟಿ, ಜತೆ ಕಾರ್‍ಯದರ್ಶಿ ಶ್ರೀಪ್ರಕಾಶ್ ಕುಕ್ಕಿಲ, ಗೋಕುಲ್ ಶೇಟ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.