ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿ ಗ್ಯಾಸ್ ಟ್ಯಾಂಕರೊಂದು ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿದ್ದಾರೆ. ಮಂಗಳವಾರ ತಡರಾತ್ರಿ ಘಟನೆ ಸಂಭವಿಸಿದ್ದು, ಟ್ಯಾಂಕರ್ ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮೃತ ಚಾಲಕನನ್ನು ತಮಿಳುನಾಡು ಮೂಲದ ಸೆಲ್ವ ಕುಮಾರ್ (41) ಎಂದು ಗುರುತಿಸಲಾಗಿದೆ.