ಬಂಟ್ವಾಳ

ಹಿರಿಯೂರು ಬಳಿ ಡಿವೈಡರ್ ಗೆ ಕಾರು ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಚಿತ್ರದುರ್ಗದ ಹಿರಿಯೂರು ಬಳಿ ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭದ್ರಾವತಿಯಿಂದ ಬೆಂಗಳೂರಿಗೆ 9 ಜನರು ಕಾರಿನಲ್ಲಿ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿದೆ.

ಜಾಹೀರಾತು

ತಾಯಮ್ಮ (50), ಸುಶ್ಮಿತಾ (13), ಲತಾ (26), ವರ್ಣಿತಾ (9), ಜಾಹ್ನವಿ (3) ಮೃತರು. ನಾಲ್ಕು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಭದ್ರಾವತಿಯಿಂದ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಸಂಜೆ 5.45 ರ ಸಮಯದಲ್ಲಿ ಆತಿಥ್ಯ ಹೋಟೆಲ್ ಸಮೀಪ ಟೈರ್ ಸಿಡಿದು ನಿಯಂತ್ರಣ ತಪ್ಪಿತು. ಇನ್ನೋವಾ ಕಾರು ಮೊದಲು ಡಿವೈಡರ್, ನಂತರ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ