ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊಲೆಯತ್ನ, ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳ, ಮೂಡುಬಿದಿರೆ ಮೂಲದ ಪ್ರಸಾದ್ ಪೂಜಾರಿ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಅದ್ವೈತ್ ಜೆಸಿಬಿ ಮತ್ತು ಯುನೈಟೆಡ್ ಟೊಯೋಟಾ ಶೋರೂಮ್ಗೆ ನುಗ್ಗಿ ರಾತ್ರಿ ವೇಳೆ ಕಳವು ಮಾಡಿದ ಪ್ರಕರಣದಲ್ಲಿ ಈತನ ವಿರುದ್ಧ ಕೇಸು ದಾಖಲಾಗಿತ್ತು.
ಆರೋಪಿಯಿಂದ 3 ಲ್ಯಾಪ್ ಟಾಪ್, 4 ಟ್ಯಾಬ್, 3 ಮೊಬೈಲ್, 2 ಚಿನ್ನದ ಬಳೆ, ಕ್ಯಾಶ್ ಲಾಕರ್, 1 ಕ್ಯಾಮೆರಾ ಹಾಗೂ ಕೃತ್ಯ ನಡೆಸಲು ಉಪಯೋಗಿಸಿದ ಲೀವರ್, ಟಾರ್ಚ್, ಮಾಸ್ಕ್ ಹಾಗೂ ಕಬ್ಬಿಣದ ರಾಡ್‌ನ್ನು ಸ್ವಾಧೀನ ಪಡಿಸಿಕೊಂಡಿದ್ದು, ಸೊತ್ತುಗಳ ಒಟ್ಟು ಮೌಲ್ಯ 1.87 ಲ.ರೂ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕೊಲೆ ಯತ್ನ ಹಾಗೂ ಕಳವು ಸೇರಿ 3 ಪ್ರಕರಣಗಳು ದಾಖಲಾಗಿದ್ದು, 2014ರಲ್ಲಿ ಈತನಿಗೆ ಕಳವು ಪ್ರಕರಣದಲ್ಲಿ ಪ್ರಕರಣ ಸಾಬೀತಾಗಿ ಶಿಕ್ಷೆಯಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ರಾತ್ರಿ ಕನ್ನ ಕಳವು ಪ್ರಕರಣ ದಾಖಲಾಗಿದ್ದರೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
Be the first to comment on "ಅಂತರ್ಜಿಲ್ಲಾ ಕಳವು ಆರೋಪಿಯ ಬಳಿ ಇತ್ತು ಮಾಸ್ಕ್, ಕಬ್ಬಿಣದ ರಾಡ್"