ಜಿಲ್ಲಾ ಸುದ್ದಿ

ಅಂತರ್ಜಿಲ್ಲಾ ಕಳವು ಆರೋಪಿಯ ಬಳಿ ಇತ್ತು ಮಾಸ್ಕ್, ಕಬ್ಬಿಣದ ರಾಡ್

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊಲೆಯತ್ನ, ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳ, ಮೂಡುಬಿದಿರೆ ಮೂಲದ ಪ್ರಸಾದ್ ಪೂಜಾರಿ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಅದ್ವೈತ್ ಜೆಸಿಬಿ ಮತ್ತು ಯುನೈಟೆಡ್ ಟೊಯೋಟಾ ಶೋರೂಮ್ಗೆ ನುಗ್ಗಿ ರಾತ್ರಿ ವೇಳೆ ಕಳವು ಮಾಡಿದ ಪ್ರಕರಣದಲ್ಲಿ ಈತನ ವಿರುದ್ಧ ಕೇಸು ದಾಖಲಾಗಿತ್ತು.

ಜಾಹೀರಾತು

ಆರೋಪಿಯಿಂದ 3 ಲ್ಯಾಪ್ ಟಾಪ್, 4 ಟ್ಯಾಬ್, 3 ಮೊಬೈಲ್, 2 ಚಿನ್ನದ ಬಳೆ, ಕ್ಯಾಶ್ ಲಾಕರ್, 1 ಕ್ಯಾಮೆರಾ ಹಾಗೂ ಕೃತ್ಯ ನಡೆಸಲು ಉಪಯೋಗಿಸಿದ ಲೀವರ್, ಟಾರ್ಚ್, ಮಾಸ್ಕ್ ಹಾಗೂ ಕಬ್ಬಿಣದ ರಾಡ್‌ನ್ನು ಸ್ವಾಧೀನ ಪಡಿಸಿಕೊಂಡಿದ್ದು, ಸೊತ್ತುಗಳ ಒಟ್ಟು ಮೌಲ್ಯ 1.87 ಲ.ರೂ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕೊಲೆ ಯತ್ನ ಹಾಗೂ ಕಳವು ಸೇರಿ 3 ಪ್ರಕರಣಗಳು ದಾಖಲಾಗಿದ್ದು, 2014ರಲ್ಲಿ ಈತನಿಗೆ ಕಳವು ಪ್ರಕರಣದಲ್ಲಿ ಪ್ರಕರಣ ಸಾಬೀತಾಗಿ ಶಿಕ್ಷೆಯಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ರಾತ್ರಿ ಕನ್ನ ಕಳವು ಪ್ರಕರಣ ದಾಖಲಾಗಿದ್ದರೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.