ಕಲ್ಲಡ್ಕ

ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ 13ರಂದು ನೂತನ ಸಭಾಭವನ ಲೋಕಾರ್ಪಣೆ

www.bantwalnews.com Editor: Harish Mambady

ಬಂಟ್ವಾಳ: ಶ್ರೀ ರಾಮಚಂದ್ರಾಪುರ ಮಠದ ಆಡಳಿತಕ್ಕೊಳಪಟ್ಟ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಮೇ 13ರಂದು ಶ್ರೀ ಕ್ಷೇತ್ರದ ನೂತನ ಸಭಾಭವನ ಲೋಕಾರ್ಪಣೆಗೊಳ್ಳಲಿದೆ.

ಈ ಸಂಬಂಧ 12 ಮತ್ತು 13ರಂದು ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, 12ರಂದು ಸಂಜೆ 6ಕ್ಕೆ ಸಪ್ತಶುದ್ಧಿ, ಪುಣ್ಯಾಹವಾಚನ, ಸಂಜೆ 7ಕ್ಕೆ ವಾಸ್ತು ರಾಕ್ಷೆಘ್ನ ಹೋಮ, ವಾಸ್ತುಪೂಜೆ, ವಾಸ್ತುಬಲಿ, 13ರಂದು ಬೆಳಗ್ಗೆ 7.08 ಗಂಟೆಗೆ ವೃಷಭಲಗ್ನ ಸುಮುಹೂರ್ತದಲ್ಲಿ ಪ್ರವೇಶ, ೭.೩೦ಕ್ಕೆ ಗಣಪತಿ ಹವನ, ೮.೩೦ಕ್ಕೆ ಶ್ರೀದೇವರಿಗೆ ಏಕಾದಶರುದ್ರ ಶಿವಪೂಜೆ, ೯.೩೦ಕ್ಕೆ ಪುರುಷಸೂಕ್ತಹವನ, ೧೧.೩೦ಕ್ಕೆ ಪೂರ್ಣಾಹುತಿ, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, 12.30 ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

ಮಧ್ಯಾಹ್ನ 2ಕ್ಕೆ ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಗಮಿಸಲಿದ್ದು, 2.15 ಕ್ಕೆ ನೂತನ ಭವನ ಲೋಕಾರ್ಪಣೆಗೈದು, ಆಶೀರ್ವಚನ ನೀಡುವರು.

 

ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಲ್.ಎನ್.ಕುಡೂರು ಭಾಗವಹಿಸುವರು. ಬಳಿಕ ಸಂಜೆ ೪ಕ್ಕೆ ಡಿವಿಜಿ ಅವರ ಕಗ್ಗದ ಬೆಳಕು ಕುರಿತು ಕವಿತಾ ಅಡೂರು ವ್ಯಾಖ್ಯಾನ ನೀಡುವರು ಎಂದು ಸೇವಾ ಸಮಿತಿ ಗೌರವಾಧ್ಯಕ್ಷ ಸಿ.ವಿ.ಗೋಪಾಲಕೃಷ್ಣ ಭಟ್ ಮತ್ತು ಅಧ್ಯಕ್ಷ ರಾಕೋಡಿ ಈಶ್ವರ ಭಟ್, ರಾಮಚಂದ್ರಾಪುರ ಮಠ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಭಟ್, ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಸೇರಾಜೆ ಸುಬ್ರಹ್ಮಣ್ಯ ಭಟ್, ಕಲ್ಲಡ್ಕ ಹವ್ಯಕ ವಲಯಾಧ್ಯಕ್ಷ ಯು.ಎಸ್.ಚಂದ್ರಶೇಖರ ಭಟ್ ನೆಕ್ಕಿತರವು, ಕೋಶಾಧಿಕಾರಿ ಎನ್.ಎಸ್. ಶ್ರೀಕಾಂತ, ಕಾರ್ಯದರ್ಶಿ ಕೆ.ಟಿ.ಗಣೇಶ್ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts