ಬಂಟ್ವಾಳ: 2019-20ನೇ ಸಾಲಿಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಒಟ್ಟಾರೆ ಶೇಕಡಾ 35 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಇಲಾಖೆಯ www.dte.kar.nic.in ವೆಬ್ಸೈಟ್ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಡಿಪ್ಲೋಮಾ ಅರ್ಜಿ ನೋಂದಣಿ ಶುಲ್ಕವನ್ನು ಸಾಮಾನ್ಯ,2ಎ,2ಬಿ,3ಎ, 3ಬಿಗೆ ರೂ 100, ಪ.ಜಾತಿ, ಪ.ಪಂಗಡಕ್ಕೆ ರೂ.50 ನಗದು ರೂಪದಲ್ಲಿ ಮೇ.18ರ ಸಂಜೆ 5.30ರೊಳಗೆ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿಮಾಡಿ ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳ ಇಲ್ಲಿ ಅನ್ಲೈನ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಂಶುಪಾಲರನ್ನು ಮುಖತಾ ಅಥವಾ ಮೊಬೈಲ್ ಸಂಖ್ಯೆ 8762328660 ನ್ನು ಸಂಪರ್ಕಿಸಲು ವಿನಂತಿಸಲಾಗಿದೆ.