ಪ್ರಮುಖ ಸುದ್ದಿಗಳು

ಕಾರುಗಳ ಸರಣಿ ಅಪಘಾತ,ಹಲವು ಮಂದಿ ಗಾಯ

ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಅಪಘಾತವಾದ ಘಟನೆ ಸೋಮವಾರ ಕೊಕ್ಕಡದಿಂದ ಧರ್ಮಸ್ಥಳಕ್ಕೆ ಹೋಗುವ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ಹಲವರು ಗಾಯಗೊಂಡಿದ್ದಾರೆ. ಇದೇ ಅಪಘಾತದ ಗಾಯಾಳುಗಳನ್ನು ಕೊಂಡೊಯ್ಯಲು ಬಂದಿದ್ದ ಆಂಬುಲೆನ್ಸ್ ಕೂಡ ಅಪಘಾತಕ್ಕೀಡಾಯಿತು. ಸೌತಡ್ಕ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಂಬುಲೆನ್ಸ್ ಪಲ್ಟಿಯಾಯಿತು.

ಜಾಹೀರಾತು

ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸ್ವಿಪ್ಟ್ ಡಿಜೈರ್ ಕಾರು ಕಾಪಿನಬಾಗಿಲು ಸಮೀಪಿಸುತ್ತಿದ್ದಂತೆ ಆಲಂಕಾರಿನಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಸೆಲಾರಿಯೋ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಸೆಲಾರಿಯೋ ಕಾರಿನಲ್ಲಿದ್ದ ಯಮುನಾ, ಮುತ್ತಪ್ಪ, ಮೋಹಿನಿ, ಮೋಕ್ಷಿ, ಧನ್ಯ ಎಂಬವರು ಗಾಯಗೊಂಡಿದ್ದಾರೆ. ಪೈಕಿ ಧನ್ಯ ಎಂಬಾಕೆಗೆ ತೀವ್ರ ಗಾಯಗಳಾಗಿದ್ದು ಉಳಿದ ನಾಲ್ಕು ಮಂದಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದೇ ವೇಳೆ ಗಾಯಾಳುಗಳನ್ನು ಕೊಂಡೊಯ್ಯಲೆಂದು ಬಂದ ಆಂಬುಲೆನ್ಸ್ ಸೌತಡ್ಕ ದೇವಳದ ದ್ವಾರದ ಸಮೀಪಿಸುತ್ತಿದ್ದಂತೆ ಎದುರು ಗಡೆಯಿಂದ ವಾಹನಗಳು ಬರುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನೆಲ್ಯಾಡಿ ಹೊರಠಾಣಾ ಪೋಲೀಸರು ಮತ್ತು ಹೈವೇ ಪ್ಯಾಟ್ರೋಲ್ ಸಿಬ್ಬಂದಿಗಳು ಅಪಘಾತ ಸ್ಥಳಕ್ಕೆ ಆಗಮಿಸಿ ಸಂಚಾರ ನಿಯಂತ್ರಣ ನಡೆಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts