ಪ್ರಮುಖ ಸುದ್ದಿಗಳು

ಅಪಾಯಕಾರಿ ಶಿರಾಡಿ ರಸ್ತೆಯಲ್ಲಿ ಅಪಘಾತ: ಉರುಳಿದ ಕಾರು, ಓರ್ವ ಮೃತ್ಯುವಶ

ಉಪ್ಪಿನಂಗಡಿಯಿಂದ ಸಕಲೇಶಪುರದವರೆಗಿನ ಹೆದ್ದಾರಿ ಮತ್ತಷ್ಟು ಅಪಾಯಕಾರಿ ಎಂಬ ಮಾತಿಗೆ ಪುಷ್ಟಿ ನೀಡುವಂತೆ ಅಪಘಾತವೊಂದು ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾರೆ.

ಮಂಗಳವಾರ ಶಿರಾಡಿಯ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಕಾರೊಂದು ಉರುಳಿ ಕಂದಕಕ್ಕೆ ಬಿದ್ದು,ಬೆಂಗಳೂರು ನಿವಾಸಿ ಸುನಿಲ್ ಎಂಬಾತ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ಮೂಲದ ತಂಡ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಸಂದರ್ಭ ಮಂಗಳವಾರ ಮಧ್ಯಾಹ್ನ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಉರುಳಿದೆ. ಈ ಸಂದರ್ಭ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅತ್ಯಂತ ಅಪಾಯಕಾರಿಯಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕ ಕೆಲಸ ನಡೆಯುತ್ತಿರುವ ಜಾಗದಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು, ಚಾಲಕರೂ ಅತಿವೇಗದಲ್ಲಿ ಹೋಗಬಾರದು ಎಂದು ಸಾರ್ವಜನಿಕರು ಹೇಳುತ್ತಿದ್ದರೂ, ಯಾರೂ ಕ್ಯಾರೆನ್ನುತ್ತಿಲ್ಲ. ಅಷ್ಟೇ ಅಲ್ಲ, ಈ ಜಾಗದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಗುಂಡಿ ತೋಡಲಾಗಿದ್ದು, ಬೈಕ್ ಸವಾರನೊಬ್ಬ ಇಲ್ಲೇ ಬಿದ್ದು ಗಾಯಗೊಂಡಿದ್ದರು.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts