ಬಂಟ್ವಾಳ ತಾಲೂಕಿನ ಅಣ್ಣಳಿಕೆ – ಹಿರ್ಣಿ ರಸ್ತೆ ನಡುವಿನ ಕುಮೇರು ಎಂಬಲ್ಲಿ ಬುಧವಾರ ನಡೆದ ಭೀಕರ ಅಪಘಾತದಲ್ಲಿ ಟಿಪ್ಪರ್ ಲಾರಿ ಮತ್ತು ಬುಲೆಟ್ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ಸಿದ್ಧಕಟ್ಟೆಯ ಹಿರ್ಣಿ ನಿವಾಸಿ ರಮೇಶ್ ಪೂಜಾರಿ ಎಂಬವರ ಪುತ್ರ, ಬೈಕ್ ಸವಾರ ಸುರೇಂದ್ರ (33), ಸಹ ಸವಾರೆ, ಮೃತರ ಸಂಬಂಧಿ ಜಯಲಕ್ಷ್ಮೀ (36) ಮೃತಪಟ್ಟವರು.
ಇವರಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಕರ್ಪೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಅಣ್ಣಳಿಕೆ-ಹಿರ್ಣಿ ಒಳರಸ್ತೆಯ ಕುಮೇರ್ ಎಂಬಲ್ಲಿ ಢಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯ ಮಧ್ಯೆ ಕೊನೆಯುಸಿರೆಳೆದ್ದಾರೆ
ಬಂಟ್ವಾಳ ಟ್ರಾಫಿಕ್ ಎಸ್ಸೈ ಮಂಜುನಾಥ್, ಎಎಸ್ಸೈ ಎಂ.ಕೆ.ಕುಟ್ಟಿ, ಸಿಬ್ಬಂದಿ ಸೋಮನಾಥ, ಮನೋಹರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)