ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರೊಡಿ ಕ್ಷೇತ್ರ ಸುಮಾರು 3 ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಕೊಡಿಮರ ಪ್ರತಿಷ್ಠಾಪನೆ ಮತ್ತು ದ್ವಾರ ಮುಹೂರ್ತ ಕಾರ್ಯಕ್ರಮ ಮೇ 7ರಂದು ಜರಗಿತು. ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.
ವಾಸ್ತು ತಜ್ಞ ಪ್ರಮಲ್ ಕುಮಾರ್ ಕಾರ್ಕಳ ಅವರ ಮಾರ್ಗದರ್ಶನದಲ್ಲಿ ಪ್ರತಿಷ್ಠಾಪನೆ ನಡೆಯಿತು. ಕ್ಷೇತ್ರ ಪುನರ್ನಿರ್ಮಾಣ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ ಮತ್ತಿತರರು ಭಾಗವಹಿಸಿದ್ದರು.