ಕೊಲೆ ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿಯೊಬ್ಬನ ಬಂಧನಕ್ಕೆ ತೆರಳಿದಾಗ ಆತ ಪೊಲೀಸರ ಮೇಲೆಯೇ ದಾಳಿ ನಡೆಸಿದ ಘಟನೆ ಜಪ್ಪಿನಮೊಗರು ಬಳಿ ನಡೆದಿದ್ದು, ಈ ಸಂದರ್ಭ ಪೊಲೀಸರು ಸ್ವಯಂ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಆರೋಪಿ ದಾಳಿಯಿಂದ ಪೊಲೀಸ್ ಕಾನ್‌ಸ್ಟೇಬಲ್‌ಗೂ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೌರೀಶ್ (29) ಬಂಧಿತ ಆರೋಪಿ. ಶೀನಪ್ಪ (45) ಗಾಯಗೊಂಡ ಪೊಲೀಸ್ ಕಾನ್ ಸ್ಟೇಬಲ್. ನಗರ ಠಾಣೆಗಳಲ್ಲಿ 3 ಕೊಲೆ ಸೇರಿದಂತೆ ಆರು ಪ್ರಕರಣಗಳ ಆರೋಪಿ ಗೌರೀಶ್ ಗೆ ಪೊಲೀಸರು ಶೋಧ ನಡೆಸುತ್ತಿದ್ದರು. ಗುರುವಾರ ರಾತ್ರಿ ಆರೋಪಿ ಜಪ್ಪಿನಮೊಗರು ಕಡೆ ಹೋಗುತ್ತಿದ್ದಾಗ ಪ್ರೆಸಿಡೆನ್ಸಿ ಸ್ಕೂಲ್ ಬಳಿ ಅಡ್ಡಗಟ್ಟಿದ ಪೊಲೀಸರು ಆತನ ಬಂಧಿಸಲು ಯತ್ನಿಸಿದ್ದಾರೆ. ಈ ಸಂದರ್ಭ ಪೊಲೀಸ್ ಕಾನ್ ಸ್ಟೇಬಲ್ ಶೀನಪ್ಪ ಎಂಬುವವರ ಆತ ಏಕಾಏಕಿ ಧಾಳಿ ಮಾಡಿ, ತಪ್ಪಿಸುವ ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭ ಅಪಾಯದ ಮುನ್ಸೂಚನೆ ಅರಿತ ಎಸ್ ಐ ಕಬ್ಬಳ್ ರಾಜ್ ಗೌರೀಶ್ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ನಗರ ಪೋಲಿಸ್ ಆಯುಕ್ತ ಸಂದೀಪ್ ಪಾಟೀಲ್, ಕಾನೂನು ಮತ್ತು ಸುವ್ಯವಸ್ಥಾ ವಿಭಾಗದ ಉಪಪೊಲೀಸ್ ಆಯುಕ್ತ ಹನುಮಂತರಾಯ, ಸಂಚಾರ ಮತ್ತು ಅಪರಾಧ ವಿಭಾಗದ ಉಪಪೊಲೀಸ್ ಆಯುಕ್ತ ಲಕ್ಷ್ಮಿಗಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.