ಬಂಟ್ವಾಳ

ಮೇ. 17ರಿಂದ 22ರವರೆಗೆ ಕಕ್ಯಪದವು ಗರಡಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಗರೋಡಿ ಕ್ಷೇತ್ರದ ನೂತನ ಶಿಲಾಮಯ ಆಲಯದಲ್ಲಿ ಶ್ರೀ ಕಡಂಬಿಲ್ತಾಯ, ಕೊಡಮಣಿತ್ತಾಯಿ,ದೈವೊಂಕುಳು, ಬ್ರಹ್ಮಬೈದರ್ಕಳ, ಮಾಯಾಂದಲ್ ದೈವಗಳ ಪುನರ್ ಪ್ರತಿಷ್ಠೆ,ಬ್ರಹ್ಮಕಲಶೋತ್ಸವ ಮೇ.17-19 ರವರೆಗೆ ನಡೆಯಲಿದೆ. ವಾರ್ಷಿಕ ಜಾತ್ರಾ ಮಹೋತ್ಸವ ಮೇ.22ರವರೆಗೆ ನಡೆಯುವುದು ಎಂದು ಕಕ್ಕೆಪದವು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

ಶನಿವಾರ ಸಂಜೆ ಶ್ರೀ ಕ್ಷೇತ್ರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಟಿ-ಚೆನ್ನಯ್ಯರೇ ಸ್ಥಾಪಿಸಿದ ಜಿಲ್ಲೆಯ 66 ಗರಡಿಗಳ ಪೈಕಿ ಕಕ್ಯಪದವು ಶ್ರೀ ಬ್ರಹ್ಮಬೈದರ್ಕಳ ಗರೋಡಿಯು ಒಂದಾಗಿದೆ. ವಿಶಿಷ್ಠವಾದ  ತೌಳವ ದ್ರಾವಿಡ ಶೈಲಿಯಲ್ಲಿ ಗರೋಡಿಯನ್ನು ಶಿಲಾಮಯವಾಗಿ ಸುಮಾರು 3 ಕೋಟಿ ರೂ.ವೆಚ್ಚದಲ್ಲಿ  ಪುನರ್ ನಿರ್ಮಿಸಲಾಗುತ್ತಿದೆ, ಎರಡೂವರೆ ಎಕ್ರೆ ಜಮೀನನ್ನು ಸರಕಾರ ಕಳೆದ ಸಂಪುಟ ಸಭೆಯಲ್ಲಿ ಗರೋಡಿಯ ಹೆಸರಿಗೆ ಮಂಜೂರಾತಿ ನೀಡಿದೆ ಎಂದರು.

ಬ್ರಹ್ಮಶ್ರೀ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರವರ ಮಾರ್ಗದರ್ಶನ,ಕಕ್ಯ ಶ್ರೀನಿವಾಸ ಅರ್ಮುಡ್ತಾಯರವರ ಉಪಸ್ಥಿತಿಯಲ್ಲಿ ಕ್ಷೇತ್ರದ ಅಸ್ರಣ್ಣರಾದ ರಾಜೇಂದ್ರ ಅರ್ಮುಡ್ತಾಯರವರ ನೇತೃತ್ವದಲ್ಲಿ ವಿವಿಧ ವೈಧಿಕ ವಿಧಿವಿಧಾನಗಳು ನಡೆಯಲಿದ್ದು, ಮೇ.17ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಸರ್ವ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ ಎಂದರು.

ಜಾಹೀರಾತು

ಮೇ.19 ರಂದು ಶಿಖರ, ಧ್ವಜಸ್ತಂಭ,ದೈವಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ನಡೆಯಲಿದೆ.ಬ್ರಹ್ಮಕಲಶದ ಪ್ರತಿದಿನ ನಿರಂತರವಾಗಿ ಸಾರ್ವಜನಿಕ ಅನ್ನಸಂತರ್ಪಣೆ,ಸಂಜೆಯ ವೇಳೆ ನಡೆಯುವ ಧಾರ್ಮಿಕ ಸಭೆಯಲ್ಲಿ ವಿವಿಧ ಕ್ಷೇತ್ರದ ಮಠಾಧೀಶರು ಆರ್ಶೀವಚನ ನೀಡಲಿದ್ದಾರೆ. ಸಾಮಾಜಿಕ,ರಾಜಕೀಯ,ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ.ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ರಮಾನಾಥ ರೈ ವಿವರಿಸಿದರಲ್ಲದೆ ಬ್ರಹ್ಮಕಲಶದ ಯಶಸ್ವಿಗೆ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ.ಹಾಗೆಯೇ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು.  ಮೇ.19 ರಿಂದ 22 ರವರೆಗೆ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೆಯು ನಡೆಯಲಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಪದ್ಮಶೇಖರ ಜೈನ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಕೆ., ವಿವಿಧ ಸಮಿತಿ ಪದಾಧಿಕಾರಿಗಳಾದ ಎ. ಚೆನ್ನಪ್ಪ ಸಾಲಿಯಾನ್, ಚಂದ್ರಶೇಖರ.ಕೆ, ವಾಸುದೇವ ಮಯ್ಯ, ಬೇಬಿ ಕುಂದರ್, ವಿಜಯಕುಮಾರ್, ವೀರೇಂದ್ರ ಕುಮಾರ್ ಜೈನ್, ಬಾಲಕೃಷ್ಣ ಅಂಚನ್, ದಿನೇಶ್ ಬಂಗೇರ, ಧರ್ಣಪ್ಪ ಪೂಜಾರಿ, ರಾಜೀವ ಕೆ. ವಿಶ್ವನಾಥ ಸಾಲ್ಯಾನ್ ಬಿತ್ತ, ಡೀಕಯ್ಯ ಕುಲಾಲ್  ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ