ವಿಟ್ಲ

ಮಾಣಿ ಜಂಕ್ಷನ್ ನಲ್ಲಿ ಗಲಾಟೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಮಾಣಿ ಜಂಕ್ಷನ್ ನಲ್ಲಿ ಸೋಮವಾರ ರಾತ್ರಿ ಸುಮಾರು 8 ಗಂಟೆ ವೇಳೆ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಗಲಾಟೆಯಾಗುತ್ತಿರುವ ಮಾಹಿತಿ ಮೇರೆ ಸ್ಥಳಕ್ಕೆ ಹೋದಾಗ, ಎರಡು ಕಾರುಗಳು ಮತ್ತು ದ್ವಿಚಕ್ರ ವಾಹನವನ್ನು ರಸ್ತೆ ಮಧ್ಯೆ ನಿಲ್ಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ ಪರಸ್ಪರ ಶಬ್ದಗಳಿಂ ಬೈದಾಡುತ್ತ ಬೇರೆಯವರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಕಲ್ಲುಗಳನ್ನು ಪರಸ್ಪರ ತೂರಾಟ ಮಾಡಿ ಕಾರುಗಳ ಗಾಜುಗಳ ಮತ್ತು ಸ್ಕೂಟರ್‌ನ ಜಖಂಗೊಳಿಸುತ್ತಿರುವಾಗ ಸಮವಸ್ತ್ರದಲ್ಲಿದ್ದ ಪಿರ್ಯಾದುದಾರರು ಮತ್ತು ಸಿಬ್ಬಂದಿಗಳು ಮದ್ಯ ಪ್ರವೇಶಿಸಿದಾಗ ದುಷ್ಕರ್ಮಿಗಳು ವಾಹನಗಳನ್ನು ಅಲ್ಲಿಯೇ ಬಿಟ್ಟು  ಓಡಿ ಹೋಗಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ 283,336,160,143,147,148 ಜೊತೆಗೆ 149 ಐಪಿಸಿ ಮತ್ತು 2(ಎ)(ಬಿ) ಕೆಪಿಡಿಎಲ್‌ ಪಿ ಕಾಯ್ದೆಯನ್ವಯ ದೂರು ದಾಖಲಾಗಿದೆ.

ಜಾಹೀರಾತು

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts